ಹಗರಿಬೊಮ್ಮನಹಳ್ಳಿ: ‘ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಭಾರತೀಯ ಸಂಸ್ಕೃತಿ, ಆದರ್ಶ, ನೈತಿಕ ಮೌಲ್ಯ ಹಾಗೂ ಸಂಸ್ಕಾರ ಬೋಧಿಸುವಂತಹ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ’ ಎಂದು ವಕೀಲರಾದ ನಾಗರಾಜ್ ಗುತ್ತೇದಾರ್ ಹೇಳಿದರು.

ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಿಬಿಎಸ್ಇ ವಿಭಾಗದಿಂದ ಹಮ್ಮಿಕೊಂಡಿದ್ದ ಸಂಕಲ್ಪ ದಿವಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಕ್ಷಣ ಸಂಸ್ಥೆಗಳು ಕೇವಲ ಪುಸ್ತಕಕ್ಕೆ ಸಂಬಂಧಿತ ಶಿಕ್ಷಣ ನೀಡಬಾರದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗಮನ ಹರಿಸಬೇಕು’ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಎಚ್.ಎ. ರಂಗನಾಥ ಮಾತನಾಡಿದರು. ಈ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಿಕ್ಷಕರಾದ ವಿನಾಯಕ ಭಟ್ಟ, ಮಧುಕರ್, ಶಿವಶಂಕ್ರಯ್ಯ, ರೇಣುಕಾ, ಭುವನೇಶ್ವರಿ, ಜ್ಯೋತಿ, ಚೈತ್ರಾ, ಬಿ.ಟಿ. ನಾಗರಾಜ, ಕೆ. ನಾಗರಾಜ, ಎಸ್. ಆಶಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.