ಬಳ್ಳಾರಿ: ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸಮಾರಂಭ ಸೆ.24ರಂದು ಬುಧವಾರ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್ದಲ್ಲಿ ಜರುಗಲಿದೆ ಎಂದು ರೆಡ್ಡಿಗುರುಪೀಠದ ಶ್ರೀ ವೇಮನಾನಂದ ಸ್ವಾಮಿ ಹಾಗೂ ರೆಡ್ಡಿ ಜನಸಂಘದ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1925ರಲ್ಲಿ ಬೆಂಗಳೂರಿನಲ್ಲಿ ರೆಡ್ಡಿಜನಸಂಘ
ಸ್ಥಾಪನೆಗೊಂಡಿತು. ಕಳೆದ ನೂರು ವರ್ಷಗಳಲ್ಲಿ ಸಂಘ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಮುಖವಾಗಿ ಸಮಾಜದ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ರೆಡ್ಡಿಜನಸಂಘ ಮಹತ್ವದ ಕೊಡುಗೆ ನೀಡಿದೆ. ಸಮಾಜಕ್ಕೆ ಮತ್ತಷ್ಟೂ ಕೊಡುಗೆ ನೀಡಬೇಕು ಎಂಬ ಆಶಯದಲ್ಲಿ ಆಸ್ಪತ್ರೆ ಸೇವೆಗೂ ಸಿದ್ಧವಾಗುತ್ತಿದ್ದು ಕಸವನಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ’ ಎಂದರು.

‘ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ ಶತಮಾನೋತ್ಸವ ಸಂಭ್ರಮದಲ್ಲಿ ರೆಡ್ಡಿ ಜನಸಂಘದಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಮಾಜಮುಖಿ ಸೇವಾ ಕಾರ್ಯಗಳ ಕುರಿತು ಚರ್ಚಿಸಿ, ಪೂರಕ ನಿರ್ಣಯಗಳನ್ನು ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದರು.

‘ಬೆಳಿಗ್ಗೆ 10ರಿಂದ ಸಂಜೆ 6ಗಂಟೆವರೆಗೆ ನಿರಂತರವಾಗಿ ಶತಮಾನೋತ್ಸವ ನಡೆಯಲಿದೆ. ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನೆರೆಯ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸೇರಿದಂತೆ ರಾಜ್ಯದ ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು ಹಾಗೂ ನಾಡಿನ ವಿವಿಧ ಜಿಲ್ಲೆಗಳ ರೆಡ್ಡಿಜನ ಸಮುದಾಯದ ಮುಖಂಡರು ಹಾಗೂ ಸಂಘದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ರೆಡ್ಡಿ ಜನಸಂಘದ ರಾಜ್ಯ ಪ್ರಮುಖ ಮುಖಂಡರಾದ ಲಕ್ಷ್ಮಣರೆಡ್ಡಿ, ಕೃಷ್ಣಾರೆಡ್ಡಿ, ಬಾಬುರೆಡ್ಡಿ ಭೈರತಿ, ರಾಜಾರೆಡ್ಡಿ, ಗಣಪಾಲ ಐನಾಥರೆಡ್ಡಿ, ಪ್ರಭಾಕರರೆಡ್ಡಿ, ಶಾಂತರಾಜ, ಹೇಮಚಂದ್ರ ರೆಡ್ಡಿ ಸುದ್ದಿಗೋಷ್ಠಿಯಲ್ಲಿದ್ದರು.

ರೆಡ್ಡಿ ಎಂದು ಬರೆಸಿ: ಸ್ವಾಮೀಜಿ

ಜಾತಿ ಜನಗಣತಿ ವೇಳೆ ಹಿಂದೂ ರೆಡ್ಡಿ ಎಂದು ಬರೆಯಿಸಬೇಕು ಎಂದು ರೆಡ್ಡಿಗುರುಪೀಠದ ಶ್ರೀವೇಮನಾನಂದ ಸ್ವಾಮಿ ಮನವಿ ಮಾಡಿದರು. ಸಂಸ್ಕೃತಿ ಸಂಪ್ರದಾಯ ಏನೇ ಇರಲಿ; ಹಾಗೆಯೇ ಇಟ್ಟುಕೊಂಡು ಜಾತಿ ಕಾಲಂನಲ್ಲಿ ಹಿಂದೂ ರೆಡ್ಡಿ ಎಂದೇ ಬರೆಸಬೇಕು. ಹಿಂದುಳಿದ ಆಯೋಗ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 1105 ಸಂಖ್ಯೆಯಡಿ ಹಿಂದೂ ರೆಡ್ಡಿ ನಮೂದಿಸಬೇಕು. ರೆಡ್ಡಿಗಳು ಒಗ್ಗಟ್ಟಾಗಿರಬೇಕು. ನಮ್ಮ ಸಮುದಾಯದ ಸಂಖ್ಯೆಯನ್ನು ಸರ್ಕಾರಕ್ಕೆ ತಿಳಿಸಬೇಕು. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಜಾತಿ ಕಾಲಂನಲ್ಲಿ ಹಿಂದೂ ರೆಡ್ಡಿ ಎಂದು ಬರೆಸುವುದನ್ನು ಮರೆಯಬಾರದು ಎಂದು ಶ್ರೀಗಳು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.