ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನಾರ್ದನ ರೆಡ್ಡಿ ದೊಡ್ಡ ಶಕ್ತಿ: ಶ್ರೀರಾಮುಲು

Published 21 ಮಾರ್ಚ್ 2024, 4:16 IST
Last Updated 21 ಮಾರ್ಚ್ 2024, 4:16 IST
ಅಕ್ಷರ ಗಾತ್ರ

ಬಳ್ಳಾರಿ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಜನಾರ್ದನ ರೆಡ್ಡಿ ಅವರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ಅವರು ಪಕ್ಷಕ್ಕೆ ಬಂದರೆ, ನಮಗೆಲ್ಲಾ ದೊಡ್ಡ ಶಕ್ತಿ ಸಿಕ್ಕಿದಂತೆ ಆಗುತ್ತದೆ’ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ. ಶ್ರೀರಾಮುಲು ಬುಧವಾರ ಹೇಳಿದರು. 

ನಗರದಲ್ಲಿ ನಡೆದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಈ ಭಾಗದ ದೊಡ್ಡ ನಾಯಕರು. ಕೇಂದ್ರದ ನಾಯಕರಾದ ಅಮಿತ್ ಶಾ, ರಾಜ್ಯದ ಉಸ್ತುವಾರಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ರಾಘವೇಂದ್ರ, ಬಿ.ಎಸ್‌ ಯಡಿಯೂರಪ್ಪ ಅವರೊಂದಿಗೆ ಜನಾರ್ಧನರೆಡ್ಡಿ ಸಂಪರ್ಕದಲ್ಲಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಶಕ್ತಿ ದೊರೆಯಲಿದೆ’ ಎಂದರು. 

‘ರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಅನುಕೂಲವಾಗುತ್ತದೆ ಎಂದು ವರಿಷ್ಠರಿಗೆ ನಾನೂ ಕೂಡ ಹೇಳಿದ್ದೇನೆ‘ ಎಂದೂ ತಿಳಿಸಿದರು.   

‌‘ಜನಾರ್ದನ ರೆಡ್ಡಿ ನಿಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಇದುವರೆಗೆ ಸಂಪರ್ಕ ಮಾಡಿಲ್ಲ’ ಎಂದರು. 

ಬಳ್ಳಾರಿಗೆ ಕಾಂಗ್ರೆಸ್‌ ಅಭ್ಯರ್ಥಿ ಇನ್ನೂ ಅಂತಿಮಗೊಳ್ಳದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು  ನಾಯಕರು ಹಿಂದೇಟು ಹಾಕುತ್ತಿದ್ಧಾರೆ. ಕಾಂಗ್ರೆಸ್‌ ಇನ್ನೂ ಹುಡುಕಾಟದಲ್ಲೇ ಇದೆ’ ಎಂದು ಲೇವಡಿ ಮಾಡಿದರು. 

ಕೆ.ಎಸ್‌ ಈಶ್ವರಪ್ಪ ಬಂಡಾಯದ ಬಗ್ಗೆ ಮಾತನಾಡಿ, ‘ಈಶ್ವರಪ್ಪ ಕಟ್ಟಾ ಹಿಂದುತ್ವವಾದಿ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ. ಪಕ್ಷದ ವರಿಷ್ಠರು ಈಶ್ವರಪ್ಪನವರ ಮನವೊಲಿಸುತ್ತಾರೆ‘ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT