ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: ತುಂಗಭದ್ರಾ ಹೂಳೆತ್ತಲು ಸಿಎಂ ಸಿದ್ದರಾಮಯ್ಯಗೆ ಮನವಿ

Published : 22 ಸೆಪ್ಟೆಂಬರ್ 2024, 16:00 IST
Last Updated : 22 ಸೆಪ್ಟೆಂಬರ್ 2024, 16:00 IST
ಫಾಲೋ ಮಾಡಿ
Comments

ಬಳ್ಳಾರಿ: ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳೆತ್ತಲು ಕ್ರಮ ಕೈಗೊಳ್ಳುವಂತೆ ‘ತುಂಗಭದ್ರಾ ರೈತ ಸಂಘ’ದಿಂದ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. 

‘ತುಂಗಭದ್ರಾ ಜಲಾಶಯದಲ್ಲಿ 33 ಟಿಎಂಸಿಯಷ್ಟು ಹೂಳು ತುಂಬಿದೆ. ಹೀಗಾಗಿ ಜಲಾಶಯದ ನೀರಿನ ಸಾಮರ್ಥ್ಯ ಕಡಿಮೆಯಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಕಾಲುವೆಗಳ ಕೆಳಭಾಗದ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಹಿಂದಿನ ವರ್ಷ ಕೇವಲ ಒಂದೇ ಬೆಳೆಗೆ ನೀರು ಸಿಕ್ಕಿದ್ದು, ಎರಡನೇ ಬೆಳೆಗೆ ನೀರಿಲ್ಲದಂತಾಗಿತ್ತು’ ಎಂದು ಪತ್ರದಲ್ಲಿ ಬರೆಯಲಾಗಿದೆ. 

‘ಹೂಳಿನ ಸಮಸ್ಯೆಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ರೈತರು ಜೀವನೋಪಾಯಕ್ಕಾಗಿ ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಆದ ಕಾರಣ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆಯ ಅಧ್ಯಕ್ಷ ಜಿ. ಪುರುಷೋತ್ತಮ ಗೌಡ ಮನವಿ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT