ಹೊಸಪೇಟೆ| ಸಾಹಿತಿ ವಿನೋದ ಕರ್ಣಂಗೆ ಶ್ರದ್ಧಾಂಜಲಿ

ಹೊಸಪೇಟೆ (ವಿಜಯನಗರ): ಇತ್ತೀಚೆಗೆ ನಿಧನರಾದ ವಕೀಲೆ, ಸಾಹಿತಿ ವಿನೋದ ಕರ್ಣಂ ಅವರಿಗೆ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂಡೂರಿನ ವಿರಕ್ತಮಠದ ಪ್ರಭು ಸ್ವಾಮೀಜಿ ಮಾತನಾಡಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ ವಿನೋದ ಕರ್ಣಂ ಅವರು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಆದರೆ, ಮಗಳ ಸಾವು ಅವರನ್ನು ಮಾನಸಿಕವಾಗಿ ಕುಗ್ಗಿಸಿ ಖಿನ್ನತೆಗೆ ಒಳಗಾಗಿ ಸಾವನ್ನಪ್ಪಿದ್ದು ಅತ್ಯಂತ ನೋವಿನ ಸಂಗತಿ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಹಿಳೆಯರಿಗೆ ಆದ್ಯತೆ ಸಿಗುವ ಕೆಲಸವಾಗಬೇಕು. ಬರುವ ಚುನಾವಣೆಯಲ್ಲಿ ಅವಿರೋಧವಾಗಿ ಮಹಿಳೆಯರನ್ನು ಅಧ್ಯಕ್ಷರನ್ನಾಗಿ ಮಾಡುವುದು ಎಲ್ಲರ ಗುರುತರ ಜವಾಬ್ದಾರಿ ಎಂದರು.
ಪರಿಷತ್ತಿನ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಎತ್ನಳ್ಳಿ ಮಲ್ಲಯ್ಯ ಮಾತನಾಡಿ, ರಾಜ್ಯದಲ್ಲಿ ಮಾದರಿ ಎನ್ನುವಂತೆ ನೂತನ ವಿಜಯನಗರ ಜಿಲ್ಲೆಯಲ್ಲಿ ಮುಂಬರುವ ಚುನಾವಣೆಗೆ ಮಹಿಳಾ ಅಭ್ಯರ್ಥಿಯನ್ನೇ ಅವಿರೋಧವಾಗಿ ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಲೇಖಕರಾದ ಸೌಭಾಗ್ಯಲಕ್ಷ್ಮಿ, ಶೀಲಾ ದೀಕ್ಷಿತ, ಡಾ. ಎಸ್.ಡಿ.ಸುಲೋಚನ, ಕವಿತಾ, ವೆಂಕಟೇಶ್ ಬಡಿಗೇರ್, ಜಂಬುನಾಥ ಎಚ್.ಎಂ., ದಯಾನಂದ ಕಿನ್ನಾಳ, ನಾಗರಾಜ ಪತ್ತಾರ್, ಎನ್.ನಾಗರಾಜ, ಜಿ.ಯರಿಸ್ವಾಮಿ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.