ಬಳ್ಳಾರಿ: ಬಳ್ಳಾರಿ ನಗರದ 21ನೇ ವಾರ್ಡ್ ವ್ಯಾಪ್ತಿಯ ಮೋಕ ರಸ್ತೆಯ ಕೆಇಬಿ ಸರ್ಕಲ್‌ನಿಂದ ಶಬರಿ ಹೋಟೆಲ್ ಬಳಿಯ ಮೇಲ್ಸೇತುವೆವರೆಗೆ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿ ಶನಿವಾರ ಬೆಳಗ್ಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.

‘ರಸ್ತೆ ನಿರ್ಮಾಣಕ್ಕೆ ಸುಮಾರು ₹3.90 ಕೋಟಿ ಅನುದಾನ ಮೀಸಲಿಡಲಾಗಿದೆ. ಸುಮಾರು 100 ರಸ್ತೆಯ ನಿರ್ಮಾಣ ಮಾಡಲಾಗುತ್ತಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಒತ್ತುವರಿ ತೆರವು, ರಸ್ತೆ ವಿಸ್ತರಣೆ ಅನಿವಾರ್ಯ. ಇದರಿಂದ ಸ್ಥಳೀಯ ನಿವಾಸಿಗಳೂ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲ ಆಗಲಿದೆ. ಸಿರಿವಾರ-ಚಾಗನೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದಲ್ಲಿ ಸದರಿ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಲಿದೆ. ಹೀಗಾಗಿ ಈ ರಸ್ತೆಯ ವಿಸ್ತರಣೆ ಹಾಗೂ ಅಭಿವೃದ್ಧಿ ಅನಿವಾರ್ಯ’ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.