ಬಳ್ಳಾರಿ: ನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ ಹೇಳಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 37ನೇ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಬಿ.ಶಫೀವುಲ್ಲಾ ಮಾತನಾಡಿದರು. ಬಳ್ಳಾರಿ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು.
ಸಾರಿಗೆ ವಿಭಾಗದ ಅಧೀಕ್ಷಕ ಗೋವಿಂದಪ್ಪ, ಹಿರಿಯ ಮೋಟಾರು ವಾಹನ ನಿರೀಕ್ಷಕ ಬಸವರಾಜ ಬೀರದಾರ ಇದ್ದರು.

ರಸ್ತೆ ಸುರಕ್ಷತಾ ಕ್ರಮಗಳ ಕುರಿತ ಮಾಹಿತಿ ಭಿತ್ತಿಪತ್ರ ಅನಾವರಣಗೊಳಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.