‘ಲಾಕ್ಡೌನ್ ಸಮಯದಲ್ಲಿ ದಿನಸಿ, ಔಷಧ ಮಳಿಗೆ ಹೊರತುಪಡಿಸಿದರೆ ಬೇರೆ ಅಂಗಡಿಗಳನ್ನು ತೆರೆಯಲು ಅವಕಾಶ ಇಲ್ಲ. ಆದರೆ, ನಿಯಮ ಉಲ್ಲಂಘಿಸಿ ಅಂಗಡಿ ತೆರೆದಿದ್ದ ತಾಯಪ್ಪ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ’ ಎಂದು ಪಟ್ಟಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಂ. ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.