ಬಳ್ಳಾರಿ: ಶಬರಿಮಲೆಯಲ್ಲಿನ ಚಿನ್ನ ಕಳವು ಪ್ರಕರಣ ಸಂಬಂಧ ಕೇರಳದ ಎಸ್ಐಟಿ ಅಧಿಕಾರಿಗಳು ಬಳ್ಳಾರಿಯ ರೊದ್ದಂ ಜ್ಯುವೆಲರ್ಸ್ ಮಾಲೀಕ ಗೋವರ್ಧನ್ ಅವರ ನಿವಾಸ, ಮಳಿಗೆಯಲ್ಲಿ 2 ದಿನ ಶೋಧ ನಡೆಸಿದ್ದಾರೆ.

ಪಾರ್ವತಿ ನಗರದಲ್ಲಿರುವ ಗೋವರ್ಧನ್ ಅವರ ನಿವಾಸ, ಬೆಂಗಳೂರು ರಸ್ತೆಯಲ್ಲಿರುವ ಆಭರಣ ಮಳಿಗೆಯಲ್ಲಿ ಅಧಿಕಾರಿಗಳು ಮಂಗಳವಾರವೇ ಶೋಧ ಆರಂಭಿಸಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಪ್ರಕ್ರಿಯೆ ಪೂರ್ಣಗೊಳಿಸಿ ನಿರ್ಗಮಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಗೋವರ್ಧನ್ ಅವರನ್ನು ಕೆಲ ದಿನಗಳ ಹಿಂದೆ ವಶಕ್ಕೆ ಪಡೆದಿದ್ದರು. ಅವರ ಬಂಧನವನ್ನು ಬುಧವಾರ ಖಚಿತಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅ.24ರಂದು ರೊದ್ದಂ ಆಭರಣ ಮಳಿಗೆಯಲ್ಲಿ ಶೋಧ ಕಾರ್ಯ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.