IV V ಮತ್ತು ಉನ್ನತ ಶ್ರೇಣಿಗಳ ಹೊಳೆ ನದಿ ಅಣೆಕಟ್ಟು ಜಲಾಶಯ ಅಣೆಕಟ್ಟಿನ ಹಿನ್ನೀರಿನ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಿ ಸಾರ್ವಜನಿಕರಿಗೆ ಮತ್ತು ಸರ್ಕಾರಿ ಕಾಮಗಾರಿಗಳಿಗೆ ಪೂರೈಸುವ ಮರಳಿಗೆ ಟೆಂಡರ್ ಮೂಲಕ ಗುತ್ತಿಗೆ ಪಡೆದ ಬ್ಲಾಕ್‌ಗಳಿಂದ ಪೂರೈಸಲಾಗುವ ಪ್ರತಿ ಮೆಟ್ರಿಕ್ ಟನ್ ಮರಳಿಗೆ ₹850 ನಿಗದಿಪಡಿಸಲಾಗಿದೆ ಎಂದು ಸರ್ಕಾರ ಈಚೆಗೆ ವಿಧಾನ ಮಂಡಲ ಅಧಿವೇಶನದಲ್ಲಿ ಸದಸ್ಯರೊಬ್ಬರಿಗೆ ನೀಡಿದ್ದ ಉತ್ತರದಲ್ಲಿ ಉಲ್ಲೇಖಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯಲು ಬ್ಲಾಕ್ ಹರಾಜು ನೆರವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಮರಳು ಬ್ಲಾಕ್‌ಗಳನ್ನು ಸರ್ಕಾರ ಹರಾಜಿಗಿಟ್ಟಿದೆಯಾದರೂ ಪರಿಸರ ಅನುಮೋದನೆ ದೊರೆಯುವುದು ವಿಳಂಬವಾಗಬಹುದು ಎಂದು ಎಂದು ಉನ್ನತ ಮಟ್ಟದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಹರಾಜು ಪ್ರಕ್ರಿಯೆಯ ಕಾಲಾವಧಿಯನ್ನು ವಿಸ್ತರಿಸಲಾಗಿದೆ ಎಂದು ಗೊತ್ತಾಗಿದೆ.