ಸಂಡೂರು: ‘ದೇಶದಲ್ಲಿನ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸಿದ ಡಾ. ಬಿ.ಆರ್.ಅಂಬೇಡ್ಕರ್ ಅವರು ಎಲ್ಲ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದಾರೆ’ ಎಂದು ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗರಾಜ ಮುಂಡರಗಿ ಹೇಳಿದರು.

ತಾಲ್ಲೂಕಿನ ಸ್ವಾಮಿಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಅಂಬೇಡ್ಕರ್ ಅವರ ನಿರಂತರ ಶ್ರಮದಿಂದ ದೇಶದ ಪರಿಶಿಷ್ಟ ಜನಾಂಗದವರು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳುವಂತಾಗಿದೆ. ಸಂವಿಧಾನವು ಎಲ್ಲ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ಸಹಾಯಕಾರಿಯಾಗಿದೆ’ ಎಂದರು.

ಅಂಬೇಡ್ಕರ್ ಅವರ ವಿಚಾರಧಾರೆ ಮತ್ತು ಸಂವಿಧಾನದ ಕುರಿತು ಶಿಕ್ಷಕ ರಮೇಶ್ ಸುಗ್ಗೇನಹಳ್ಳಿ ಉಪನ್ಯಾಸ ನೀಡಿದರು. ಕರ್ನಾಟಕ ರಾಜ್ಯ ಖನಿಜ ನಿಗಮದ ಉಪಾಧ್ಯಕ್ಷ ಎಚ್.ಲಕ್ಷ್ಮಣ, ಮುಖಂಡರಾದ ರಾಮಕೃಷ್ಣ ಹೆಗಡೆ, ಶಿವಲಿಂಗಪ್ಪ, ಗೋವರ್ಧನ, ನಟರಾಜ, ರಾಜಣ್ಣ, ನಿಂಗಪ್ಪ ಐಹೊಳೆ, ದುರುಗಣ್ಣ, ತಾಯಪ್ಪ, ಮರಿಸ್ವಾಮಿ, ಹನುಮಂತರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-25-113989525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.