ಸಂಡೂರು: ‘ಸಮಾಜದಲ್ಲಿನ ಎಲ್ಲ ಕುಟುಂಬಗಳ ಸ್ಥಿತಿಗತಿ ತಿಳಿಯಲು ಜನಗಣತಿ ಅವಶ್ಯವಾಗಿದೆ’ ಎಂದು ಸಹಾಯಕ ಆಯುಕ್ತ ರಾಜೇಶ್ ಹೇಳಿದರು.

ತಾಲ್ಲೂಕಿನ ವಡ್ಡು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ 2027 ಜನಗಣತಿ–ಸ್ವಯಂ ಗಣತಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಸ್ವಯಂ ಗಣತಿ ಮಾಡಿಕೊಳ್ಳುವ ಮೂಲಕ ಜನಗಣತಿಯಲ್ಲಿ ನೇರವಾಗಿ ಭಾಗಿಯಾಗಬಹುದು. ಇದರಿಂದ ಸಾರ್ವಜನಿಕರು ನಿಖರ ಮಾಹಿತಿ ನೀಡಿದಂತಾಗುತ್ತದೆ. ಸಮಯ ಉಳಿತಾಯವಾಗುತ್ತದೆ. ಇತರರಿಗೂ ಈ ಬಗ್ಗೆ ಪ್ರೇರೇಪಿಸುವ ಮೂಲಕ ಜನಗಣತಿಯ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು’ ಎಂದರು.

ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನಬಸಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ್, ಸಹಾಯಕ ನಿರ್ದೇಶಕ ಮಹೇಶ್ ಕುಮಾರ್, ಯೋಜನಾಧಿಕಾರಿ ಹನುಮಗೌಡ, ಸಂಜೀವಿನಿ ಯೋಜನೆ ಕಾರ್ಯಕ್ರಮ ವ್ಯವಸ್ಥಾಪಕ ಸೋಮಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-25-766932706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.