ಸಂಡೂರು: ತಾಲ್ಲೂಕಿನಾದ್ಯಂತ ಪ್ರತಿ ಬಡ ರೈತರ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸರಬರಾಜು ಮಾಡಲು ಸೂಕ್ತ ಕ್ರಮವಹಿಸುವಂತೆ ಒತ್ತಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಸಂಡೂರು ತಾಲ್ಲೂಕು ಘಟಕದ ಮುಖಂಡರು ತಹಶೀಲ್ದಾರ್ ಅನಿಲ್ ಕುಮಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಸಂಡೂರು ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್ ಮೇಟಿ ಮಾತನಾಡಿ, ‘ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿನ ಬಡ ರೈತರ ಟ್ರ್ಯಾಕ್ಟರ್ಗಳಿಗೆ ಡೀಸೆಲ್ ಕೊರತೆ ಉಂಟಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಂಭವವಿದೆ. ತಾಲ್ಲೂಕು ಆಡಳಿತವು ಶೀಘ್ರವಾಗಿ ರೈತರಿಗೆ ಡೀಸೆಲ್ ಕೊರತೆ ನಿವಾರಣೆಗೆ ಸೂಕ್ತ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಂಘದ ಮುಖಂಡರಾದ ಮೌನೇಶ್, ಎಂ.ಎಲ್.ಕೆ. ನಾಯ್ಡು, ವಿವಿಧ ಗ್ರಾಮಗಳ ರೈತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-1366320796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.