ಸಂಡೂರು: ‘ಆಲ್ ಇಂಡಿಯಾ ಕಿಸಾನ್ ಸಭಾ 90 ವರ್ಷ ಪೂರೈಸಿದ್ದು, ಸರ್ಕಾರವು ರೈತರ ಜಮೀನುಗಳ ಬಲವಂತದ ಭೂ ಸ್ವಾಧೀನವನ್ನು ಕೈಬಿಡಬೇಕು. ಕುಡತಿನಿಯ ಭೂಸಂತ್ರಸ್ತರಿಗೆ ನ್ಯಾಯಯುತ ಭೂ ಬೆಲೆಯನ್ನು ನೀಡುವುದರ ಜೊತೆಗೆ ಉದ್ಯೋಗ ಭದ್ರತೆ ಒದಗಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ. ಪಂಪನಗೌಡ ಒತ್ತಾಯಿಸಿದರು.

ತಾಲ್ಲೂಕಿನ ಕುರೆಕುಪ್ಪ ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಆಲ್ ಇಂಡಿಯಾ ಕಿಸಾನ್ ಸಭಾ 90ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸರ್ಕಾರವು ಕುಡತಿನಿ ರೈತರಿಗೆ ಉಂಟಾದ ಭೂಬೆಲೆ ವಂಚನೆಯನ್ನು ಸರಿಪಡಿಸಿ ಸೂಕ್ತ ಬೆಲೆ ನೀಡಬೇಕು. ಬಡ ರೈತರಿಗೆ ಅನುಕೂಲವಾದ ಕೃಷಿ ಯೋಜನೆಗಳನ್ನು ಜಾರಿಗೆ ತರಬೇಕು. ರೈತರು ಬೆಳೆದ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು’ ಎಂದರು.

ಕುರೆಕುಪ್ಪ ಗ್ರಾಮ ಘಟಕದ ಗೌರವ ಅಧ್ಯಕ್ಷ ಎನ್. ದೇವಣ್ಣ ಧ್ವಜಾರೋಹಣ ಮಾಡಿದರು. ಸಿಪಿಐಎಂ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎ.ಸ್ವಾಮಿ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ವಿ.ದೇವಣ್ಣ, ರೈತರಾದ ಶಿವರುದ್ರಗೌಡ ಪಂಪನಗೌಡ, ಮಹಾಂತೇಶ್, ಸಿದ್ದೇಶ್, ವೀರಭದ್ರ ಸ್ವಾಮಿ, ಬಸವರಾಜ, ಅಂಜಿನಪ್ಪ, ತಿಪ್ಪೇಸ್ವಾಮಿ, ಸಿದ್ದಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-25-1129693178

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.