ಸಂಡೂರು: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ (5ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://swdhmis-karanataka.gov.in/#/lagin ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9448316710 ಸಂಪರ್ಕಿಸಬಹುದು ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-1336634077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.