ಸಂಡೂರು: ತಾಲ್ಲೂಕಿನ ಮೆಟ್ರಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಲಕ್ಕಲಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸರಕು ವಾಹನದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ತೋರಣಗಲ್ಲು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಂದ ಅಕ್ರಮವಾಗಿ ಸಂಗ್ರಹಿಸಿ ಸರಕು ವಾಹನದಲ್ಲಿ ಸಾಗಾಣಿಕೆ ಮಾಡುವ ವೇಳೆ ಸಂಡೂರಿನ ಆಹಾರ ಇಲಾಖೆಯ ಅಧಿಕಾರಿಗಳು ಖಚಿತ ಮಾಹಿತಿಯಿಂದ ದಾಳಿ ನಡೆಸಿದ್ದಾರೆ.

₹ 34,000 ಮೌಲ್ಯದ ಒಟ್ಟು 30 ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆಯ ನಿರೀಕ್ಷಕ ಪ್ರದೀಪ್ ಕುಮಾರ್ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಾಗಿದೆ.

₹ 20 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶ

ತೆಕ್ಕಲಕೋಟೆ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದವರನ್ನು ಪೊಲೀಸರು ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ.

ಪಡಿತರ ಅಕ್ಕಿಯನ್ನು ತೆಕ್ಕಲಕೋಟೆಯಿಂದ ಸಿರುಗುಪ್ಪ ಕಡೆಗೆ ಹೋಗುವ ಮಾರ್ಗದಲ್ಲಿ ಮೂರು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದ 50 ಕೆಜಿ ತೂಕದ 16 ಮೂಟೆಗಳಲ್ಲಿದ್ದ ಒಟ್ಟು ₹ 20 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಸಿರುಗುಪ್ಪ ಆಹಾರ ನಿರೀಕ್ಷಕ ಮಹಾ ರುದ್ರಗೌಡ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂರು ದ್ವಿಚಕ್ರ ವಾಹನ ಹಾಗೂ ಸವಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-25-46021041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.