ಸಂಡೂರು: ‘ಜ್ಞಾನ ಪ್ರಕಾಶ ಸ್ವಾಮೀಜಿ ಅವರು ಮಾದಿಗ ಸಮುದಾಯ ಹಾಗೂ ಒಳ ಮೀಸಲಾತಿ ವಿರುದ್ಧವಾಗಿ ನೀಡಿರುವ ಹೇಳಿಕೆಗಳು ಸರಿಯಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಒಳ ಮೀಸಲಾತಿ ಅವಶ್ಯಕ ಎಂಬುದನ್ನು ಗಮನಿಸಬೇಕು’ ಎಂದು ಅಖಿಲ ಕರ್ನಾಟಕ ಆದಿ ಜಾಂಭವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಐಹೊಳೆ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳ ಮೀಸಲಾತಿ ಬೆಂಬಲಿಸಿ ಹೋರಾಟ ನಡೆಸಿದ ಜ್ಞಾನ ಪ್ರಕಾಶ ಸ್ವಾಮೀಜಿ ಅವರು ಇದೀಗ ವಿರುದ್ಧವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಮುಖಂಡರಾದ ಹೊಸಳ್ಳಿ ತಾಯಪ್ಪ, ಮರಿಸ್ವಾಮಿ ಶಿವಲಿಂಗಪ್ಪ, ರಾಮಕೃಷ್ಣ ಹೆಗಡೆ, ದೇವದಾಸ್ ಶಿವಕುಮಾರ್, ಮಲ್ಲೇಶ್ ಕಂತೂರು, ವೈಟಿಜಿ ಶಿವಕುಮಾರ್, ಗಂಗಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-25-1117782795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.