ಸಂಡೂರು: ಪಟ್ಟಣದ ಹೊರವಲಯದ ಸೀನ ಬಸಪ್ಪ ಕ್ಯಾಂಪ್ ಬಳಿ ಲಾರಿ ವೆಲ್ಡಿಂಗ್ ಮಾಡುವಾಗ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಎರಡು ಲಾರಿಗಳು ಬೆಂಕಿಗೆ ಆಹುತಿಯಾಗಿ, ಮೂವರು ತೀವ್ರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಸಂಡೂರು ಪಟ್ಟಣದ ನಿವಾಸಿ, ಮೆಕ್ಯಾನಿಕ್ ಮಹಮ್ಮದ್, ನಂದಿಹಳ್ಳಿ ಗ್ರಾಮದ ನಿವಾಸಿ, ಲಾರಿ ಚಾಲಕ ಶ್ರೀಕಾಂತ್, ರಾಮಪ್ಪ ಅವರಿಗೆ ಶೇ 60ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ.

ವೆಲ್ಡಿಂಗ್ ವೇಳೆ ಡೀಸೆಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಬೆಂಕಿಯು ಮೂರೂ ಲಾರಿಗಳಿಗೆ ಆವರಿಸಿತು. ಎರಡು ಲಾರಿಗಳು ಸಂಪೂರ್ಣ, ಒಂದು ಲಾರಿ ಭಾಗಶಃ ಸುಟ್ಟಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಸಂಸದ ಇ.ತುಕಾರಾಂ, ತಹಶೀಲ್ದಾರ್ ಅನಿಲ್ ಕುಮಾರ್ ಜಿ., ಪಿಎಸ್ಐ ಯು.ಡಾಕೇಶ್, ತಾಲೂಕು ಮಟ್ಟದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೆಕ್ಯಾನಿಕ್ ರಫೀಕ್ ನೀಡಿದ ದೂರು ಆಧರಿಸಿ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-25-124648672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.