ಸಂಡೂರು: ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಎಸ್. ಬಸಾಪುರ ಗ್ರಾಮದಲ್ಲಿ ಬುಧವಾರ ಮಾರಿಕಾಂಬಾ, ಉಡಸಲಮ್ಮದೇವಿಯ ಜಾತ್ರೆಯ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು.

ಪ್ರತಿ ಒಂಬತ್ತು ವರ್ಷಕ್ಕೊಮ್ಮೆ ನಡೆಯುವ ಗ್ರಾಮ ದೇವತೆಯ ಜಾತ್ರೆಯಾಗಿದ್ದು, ಗ್ರಾಮದ ಎಲ್ಲ ದೇವಸ್ಥಾನಗಳಿಗೆ, ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿತ್ತು.

ಗ್ರಾಮದ ಜನರು ಮಂಗಳವಾರ ಮಾರಿಕಾಂಬಾ, ಉಡಸಲಮ್ಮ ದೇವಸ್ಥಾನಗಳಿಗೆ ಕುಟುಂಬಗಳ ಸಮೇತ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮಾರಿಕಾಂಬಾ, ಉಡಸಲಮ್ಮ ದೇವರಿಗೆ ವಿಶೇಷ ಹೂವಿನ, ಆಭರಣಗಳಿಂದ ಅಲಂಕಾರ ಮಾಡಲಾಗಿತ್ತು. ಬುದುವಾರ ಬೆಳಿಗ್ಗೆ ಗ್ರಾಮದ ಜನರು ದೇವರಿಗೆ ಕುಂಭ ಹೊತ್ತು ಭಕ್ತಿ ಸಮರ್ಪಿಸಿದರು.

ಭಾರಿ ಜನಸ್ತೋಮ ಸೇರಿದ್ದರಿಂದ ಗ್ರಾಮದ ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-966266172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.