ಸಂಡೂರು : ತಾಲ್ಲೂಕಿನ ದೋಣಿಮಲೈ ಪಟ್ಟಣದಲ್ಲಿ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್ಎಂಡಿಸಿ)ಕುಮಾರಸ್ವಾಮಿ ಗಣಿ ಕಂಪನಿಯಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡಿದ ಕಾರ್ಮಿಕರನ್ನು ವಜಾಗೊಳಿಸದೆ, ಮುಂದುವರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ, ಸಂಯುಕ್ತ ಗಣಿ ಕಾರ್ಮಿಕರ ಸಂಘದ ಕಾರ್ಮಿಕರು, ವಿವಿಧ ಸಂಘಟನೆಗಳ ಮುಖಂಡರು ಎನ್ಎಂಡಿಸಿ ಆಡಳಿತ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಸಂಯುಕ್ತ ಗಣಿ ಕಾರ್ಮಿಕ ಸಂಘದ ಕಾರ್ಯಾಧ್ಯಕ್ಷ ಎ. ದೇವದಾಸ್ ಮಾತನಾಡಿ, ‘ಈ ಗಣಿ ಕಂಪನಿಯಲ್ಲಿ ನೂರಾರು ಗುತ್ತಿಗೆ ಕಾರ್ಮಿಕರು ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ರಾಕ್ಟೆಕ್ ಕಂಪನಿಗೆ ನೀಡಿದ್ದ ಗುತ್ತಿಗೆ ಅವಧಿ ಮುಗಿದಿದ್ದು, ವಿಘ್ನೇಶ್ ಇನ್ಫ್ರಾಪ್ರಾಜೆಕ್ಟ್ಗೆ ಹೊಸದಾಗಿ ಟೆಂಡರ್ ನೀಡಲಾಗಿದೆ. 500ಕ್ಕೂ ಹೆಚ್ಚು ಕಾರ್ಮಿಕರು ಕೆಲಸದಿಂದ ವಜಾಗೊಳ್ಳುವ ಸಂಭವವಿದೆ. ಕಾರ್ಮಿಕರನ್ನು ಮುಂದುವರಿಸುವ ಕುರಿತು ಭರವಸೆ ನೀಡಿದ್ದರೂ, ಇಲ್ಲಿಯವರೆಗೂ ಯಾವುದೇ ಸ್ಪಷ್ಟ ಕ್ರಮ ತೆಗೆದುಕೊಂಡಿಲ್ಲ’ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಮಾತನಾಡಿ, 'ಕಾರ್ಮಿಕರು ತಮ್ಮ ಶ್ರಮದಿಂದ ಇಂತಹ ಬೃಹತ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಗುತ್ತಿಗೆದಾರರು ಬದಲಾದರೂ ಕಾರ್ಮಿಕರನ್ನು ಮುಂದುವರೆಸಬೇಕು. ಕಾರ್ಮಿಕರು ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲು ಒಗ್ಗಟ್ಟು ಕಾಪಾಡಿಕೊಳ್ಳಬೇಕು' ಎಂದು ಕರೆ ನೀಡಿದರು.

ಎನ್ ಎಂ ಡಿ ಸಿ ಕಂಪನಿಯ ಅಧಿಕಾರಿ ವೇಲು ವಸಂತನ್ ಮಾತನಾಡಿ, ಏಪ್ರಿಲ್ 20ರಂದು ಎನ್. ಎಂ. ಡಿ. ಸಿ, ಗುತ್ತಿಗೆದಾರರ ಸಂಘದ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಿಗದಿಪಡಿಸುವುದಾಗಿ ತಿಳಿಸಿದರು. ರಾಕ್ ಟೆಕ್ ಕಂಪನಿ ಅಡಿ ಕೆಲಸ ಮಾಡಿದ ಎಲ್ಲಾ ಕಾರ್ಮಿಕರ ವಿವಿಧ ಮಾಹಿತಿಯೊಂದಿಗೆ ಪಟ್ಟಿ ನೀಡಲು ಕಾರ್ಮಿಕ ಸಂಘಟನೆ ಮುಖಂಡರಿಗೆ ತಿಳಿಸಿದರು.

ಎಐಯುಟಿಯುಸಿ ಮುಖಂಡರಾದ ಸುರೇಶ್, ಕಿರಣ್ ಕುಮಾರ್, ಸಂಯುಕ್ತ ಗಣಿ ಕಾರ್ಮಿಕ ಸಂಘದ ಮುಖಂಡರಾದ ಅಂಬರೀಷ್, ಬಾಬು, ಕೃಷ್ಣಪ್ಪ, ತಿಮ್ಮಣ್ಣ, ಬಸವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-1235880287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.