ಸಂಡೂರು: 'ಗ್ರಾಮೀಣ ಪ್ರದೇಶದ ರೈತರು ಕೃಷಿ ಚಟುವಟಿಕೆಯಲ್ಲಿ ಹೆಚ್ಚಿನ ಆದಾಯಗಳಿಸಲು ನರೇಗಾ ಯೋಜನೆಡಿಯಲ್ಲಿ ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕೆ ಮುಂದಾಗಬೇಕು' ಎಂದು ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ್ ಹೇಳಿದರು.

ತಾಲ್ಲೂಕಿನ ಮೆಟ್ರಿಕಿ, ವಿಠಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ನರೇಗಾ ಯೋಜನೆಡಿಯಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದರು.

'ಕೂಲಿ ಕಾರ್ಮಿಕರು ಮಣ್ಣು ಮತ್ತು ಜಲ ಸಂರಕ್ಷಣಾ ಕಾಮಗಾರಿಗಳಾದ ಸಮಗ್ರ ಕೆರೆ,ಕುಂಟೆಗಳ ಸಮಗ್ರವಾಗಿ ಅಭಿವೃದ್ಧಿಪಡಿಸಲು ಹೆಚ್ವಿನ ಆದ್ಯತೆ ನೀಡಬೇಕು. ರೈತರು ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿವಹಿಸಬೇಕು.

‘60 ವರ್ಷ ಮೇಲ್ಪಟ್ಟ ಕೂಲಿ ಕಾರ್ಮಿಕರಿಗೆ ಕಾಮಗಾರಿ ಅಳತೆಯಲ್ಲಿ ಶೇಕಡ 50ರಷ್ಟು ರಿಯಾಯಿತಿ ಇದ್ದು ಹೆಚ್ಚಿನ ರೀತಿಯಲ್ಲಿ ಕೆಲಸ ನೀಡಲು ಅಧಿಕಾರಿಗಳು ಸೂಕ್ತಕ್ರಮವಹಿಸಬೇಕು' ಎಂದರು.

ಸಂಡೂರು ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ವಸಂತ್ ರಾಜ್, ಅಧಿಕಾರಿ ಮಹೇಶ್ ಕುಮಾರ್, ಪಿಡಿಒಗಳಾದ ಹನುಮಂತಪ್ಪ, ರಂಗಸ್ವಾಮಿ, ಕಾರ್ಯದರ್ಶಿ ಗಳಾದ ಬಸವರಾಜ್, ಹುಚ್ಚಪ್ಪ, ತಾಂತ್ರಿಕ ಸಂಯೋಜಕ ಯಂಕಪ್ಪ, ಸಿಬ್ಬಂದಿ ಮಂಜುನಾಥ, ಸುಭಾಸ್ ಚಂದ್ರ, ವಿವಿಧ ಗ್ರಾಮಗಳ ಕಾರ್ಮಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-25-1607802152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.