ಸಂಡೂರು: ತಾಲ್ಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಸೋಮವಾರ ಭಾರಿ ಗಾಳಿ ಸಹಿತ ಮಳೆ ಸುರಿದಿದ್ದರಿಂದ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ಕೆಲ ರೈತರ ಜಮೀನುಗಳಲ್ಲಿನ ಬಾಳೆ ಬೆಳೆಯು ಸಂಪೂರ್ಣವಾಗಿ ನೆಲ ಕಚ್ಚಿದ್ದರಿಂದ ರೈತರು ಹೆಚ್ಚಿನ ಆತಂಕಕ್ಕೆ ಒಳಗಾಗಿದ್ದಾರೆ.

ಗೊಲ್ಲಲಿಂಗನಹಳ್ಳಿ ಗ್ರಾಮದ ರೈತರಾದ ಸಂತೋಷರೆಡ್ಡಿ, ಹನಮಂತಪ್ಪ, ಎರ್ರಿಸ್ವಾಮಿ ಅವರುಗಳ ಕ್ರಮವಾಗಿ 50, 70, 90 ಸೆಂಟ್ಸ್ ಜಮೀನುಗಳಲ್ಲಿನ ಬಾಳೆ ಬೆಳೆಯು ಗಾಳಿ ಮಳೆಗೆ ನೆಲ ಕಚ್ಚಿದ್ದರಿಂದ ಅಂದಾಜು ಲಕ್ಷಾಂತರ ರೂ. ಬೆಳೆ ನಷ್ಟವಾಗಿದ್ದು ರೈತರು ಹೆಚ್ಚಿನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

' ಸೋಮವಾರ ಸುರಿದ ಗಾಳಿ ಮಳೆಗೆ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ಕೆಲ ರೈತರ ಜಮೀನುಗಳಲ್ಲಿನ ಬಾಳೆ ಬೆಳೆಯು ನೆಲ ಕಚ್ಚಿದ್ದು, ಶೀಘ್ರವಾಗಿ ಜಮೀನುಗಳಿಗೆ ತೆರಳಿ, ಸ್ಥಳ ಮಹಜರು ನಡೆಸಿ ಸಂಬಂಧ ಪಟ್ಟ ಇಲಾಖೆಗೆ ಸೂಕ್ತ ಮಾಹಿತಿ ಒದಗಿಸಲಾಗುವುದು ಜೊತೆಗೆ ಪರಿಹಾರಕ್ಕಾಗಿ ಸೂಕ್ತ ಕ್ರಮ ವಹಿಸಲಾಗುವುದು' ಎಂದು ಗೊಲ್ಲಲಿಂಗಮನಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಮುರುಡ ಬಸಪ್ಪ ತಿಳಿಸಿದರು.

ತಂಪೆರದ ಮಳೆ: ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು, ಸಿಡಿಲು, ಮಿಂಚು ಸಹಿತ ಕೆಲಕಾಲ ಉತ್ತಮ ಮಳೆಯಾದರೆ ಸಂಡೂರು ಪಟ್ಟಣದಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಗ್ರಾಮದಲ್ಲಿ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣವಿತ್ತು. ಸಂಜೆ ಏಕಾಎಕಿ ಗುಡುಗು ಸಿಡಿಲುನೊಂದಿಗೆ ಮಳೆ ಆರಂಭವಾಯಿತು. 15 ನಿಮಿಷಕ್ಕೂ ಹೆಚ್ಚು ಸಮಯ ಜೋರಾಗಿ ಮಳೆ ಸುರಿದಿದ್ದರಿಂದ ಗ್ರಾಮದ ಓಣಿ, ರಸ್ತೆಗಳಲ್ಲಿ ನೀರು ಹರಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-25-816981929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.