ಸಂಡೂರು: ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಬನ್ನಿಹಟ್ಟಿ ಗ್ರಾಮದ ಕ್ರಾಸ್ನಲ್ಲಿ ಬುಧವಾರ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಾರಿಗೆ ಬಸ್ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.

ರೈತ ಸಂಘದ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ವಿರುಪನಗೌಡ ಮಾತನಾಡಿ, ‘ಬನ್ನಿಹಟ್ಟಿ, ನಾಗಲಾಪುರ, ಲಿಂಗದಹಳ್ಳಿ, ಕೊಡಾಲು ಗ್ರಾಮಗಳು ಸೇರಿದಂತೆ ಸುತ್ತಲಿನ ಗ್ರಾಮಗಳ ಶಾಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಿತ್ಯ ಸಂಡೂರು, ಹೊಸಪೇಟೆ, ಬಳ್ಳಾರಿಯ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಬಸ್ಗಳು ಸಕಾಲಕ್ಕೆ ನಿಲುಗಡೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಅಧಿಕಾರಿಗಳು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಬಿಡಬೇಕು’ ಎಂದು ಒತ್ತಾಯಿಸಿದರು.

ಸಂಡೂರಿನ ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿನೀಡಿ, ವಿದ್ಯಾರ್ಥಿಗಳ ಸಮಸ್ಯೆ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ತೋರಣಗಲ್ಲು ಪೊಲೀಸ್ ಠಾಣೆಯ ಪೊಲೀಸರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿ, ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.