ಸಂಡೂರು: ತಾಲ್ಲೂಕಿನ ತಾಳೂರು ಗ್ರಾಮದಲ್ಲಿನ ಬಡ ಜನರಿಗೆ ವಸತಿ ನಿವೇಶನ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ತಾಳೂರು ಗ್ರಾಮ ಪಂಚಾಯಿತಿ ಪಿಡಿಒ ಪ್ರಭುವನ ಗೌಡ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯ ಎಸ್. ಕಾಲುಬಾ ಮಾತನಾಡಿ, 'ಗ್ರಾಮದಲ್ಲಿ ಹಲವಾರು ವರ್ಷಗಳಿಂದ ನೆಲೆಸಿರುವ ಬಡ ಕುಟುಂಬಗಳಿಗೆ ವಸತಿ ಯೋಜನೆಗಳಲ್ಲಿ ನಿವೇಶನ ರಹಿತರಿಗೆ ನಿವೇಶನ, ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿ ಕೊಡಬೇಕು. ಒಂದೇ ಮನೆಯಲ್ಲಿ ಎರಡು ಮೂರು ಕುಟುಂಬಗಳು ಅವಿಭಕ್ತ ಕುಟುಂಬವಾಗಿ ಹೊರಹೊಮ್ಮಿವೆ. ಈ ಪ್ರದೇಶದ ಭೂಮಿಯ ಬೆಲೆ ಗಗನಕೇರಿದ್ದು ಬಡ ಜನರು ನಿವೇಶನವನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ ಕೃಷಿ ಜಮೀನುಗಳಲ್ಲಿ ನಿವೇಶನವನ್ನು ಖರೀದಿ ಮಾಡಿ ಪರದಾಡುತ್ತಿದ್ದಾರೆ ಕೊಟ್ಟ ನಿವೇಶನವೂ ಸಿಗದೇ,ಹಣವು ವಾಪಸ್ ಆಗದೆ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದಾರೆ. ಲಕ್ಷಗಟ್ಟಲೆ ಏರಿಕೆ ಕಂಡಿರುವ ನಿವೇಶನ ಖರೀದಿಸಲು ಬಡವರು, ಕೂಲಿಕಾರರಿಗೆ ರೈತರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ, ಸಾಧ್ಯವಾಗುವುದಿಲ್ಲ ಸರ್ಕಾರವು ಬಡ ಜನರ ಅನುಕೂಲಕ್ಕಾಗಿ ವಸತಿ ಮತ್ತು ನಿವೇಶನವನ್ನು ಶೀಘ್ರವಾಗಿ ಕಲ್ಪಿಸಬೇಕು' ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-25-1150544088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.