ಕುಡತಿನಿ(ಸಂಡೂರು): ಪಟ್ಟಣದ 8ನೇ ವಾರ್ಡ್ನ ಶಂಕ್ರಪ್ಪತಾತ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯು ಕೇವಲ ದೇವಸ್ಥಾನದ ಹುಂಡಿಗೆ ಮಾತ್ರ ಸೀಮಿತವಾಗಿದ್ದು, ಮೂಲ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿದ ಭಕ್ತರು ದೇವಸ್ಥಾನದ ಆವರಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ ಧಾರ್ಮಿಕ ದತ್ತಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ವಿ.ನಾಗಲಿಂಗ ಆಚಾರಿ ಮಾತನಾಡಿ, ‘ಶಂಕರಪ್ಪತಾತ ದೇವಸ್ಥಾನವು ಪುರಾತನ ಕಾಲದ ದೇವಸ್ಥಾನವಾಗಿದ್ದು, ಪ್ರತಿ ಅಮಾವಾಸ್ಯೆ ದಿನ ಅನೇಕ ಭಕ್ತರು ಸೇರುವ ಪುಣ್ಯಕ್ಷೇತ್ರವಾಗಿದೆ. ದೇವಸ್ಥಾನದಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ನೆರಳಿನ ವ್ಯವಸ್ಥೆ ಸೇರಿದಂತೆ ಇತರ ಸೌಲಭ್ಯಗಳಿಂದ ದೇವಸ್ಥಾನ ವಂಚಿತವಾಗಿದೆ’ ಎಂದರು.

ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯ ಮಾಡಿದೆ. ಇಲಾಖೆ ದೇವಸ್ಥಾನದ ಹುಂಡಿಯ ಹಣಕ್ಕೆ ಮಾತ್ರ ಸೀಮಿತವಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಬಂಗಾರ, ಬೆಳ್ಳಿಯ ಆಭರಣ, ಮೊಬೈಲ್ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳು ಕಳ್ಳತನವಾಗುತ್ತಿದ್ದು, ದೇವಸ್ಥಾನಕ್ಕೆ ಸಿ.ಸಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ವೆಂಕಟೇಶ್, ಶಂಕರ್, ಸಂತೋಷ ಗೌರಿಶಂಕರ, ಗುರುಪಾದಪ್ಪ, ಸುಂಕಮ್ಮ, ಮಾರೆಕ್ಕ, ಅಂಬಮ್ಮ, ತಿಪ್ಪಮ್ಮ, ಲಕ್ಷ್ಮಿ, ಹೊನ್ನೂರಮ್ಮ, ಮಾರೆಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-749441569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.