ಸಂಡೂರು: ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಕೆಲ ಗ್ರಾಮಗಳಲ್ಲಿ ಬುಧವಾರ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಕೆಲ ಸಮಯ ಉತ್ತಮವಾಗಿ ಮಳೆ ಸುರಿದಿದ್ದರಿಂದ ರೈತಾಪಿ ಜನ ಸಂತಸಗೊಂಡಿದ್ದಾರೆ.

ವಡ್ಡು ಗ್ರಾಮದಲ್ಲಿ ಅಲಿಕಲ್ಲು ಸಹಿತ ಮಳೆಯು ಜೋರಾಗಿ ಸುರಿಯಿತು. ಬನ್ನಿಹಟ್ಟಿ ಗ್ರಾಮದಲ್ಲಿ ಗುಡುಗು, ಸಿಡಿಲಿನೊಂದಿಗೆ 20 ನಿಮಿಷಕ್ಕೂ ಹೆಚ್ಚು ಕಾಲ ರಭಸವಾಗಿ ಮಳೆ ಸುರಿದಿದ್ದರಿಂದ ರಸ್ತೆಗಳಲ್ಲಿ ಮಳೆ ನೀರು ಹರಿಯಿತು.

ತಾಳೂರು, ವಿ.ನಾಗಲಾಪುರ, ಎಸ್.ಗಂಗಲಾಪುರ, ಜೋಗಾ, ವಿಠಲಾಪುರ, ಡಿ. ಅಂತಾಪುರ, ತಾರಾನಗರ ಗ್ರಾಮ ಸೇರಿದಂತೆ ಇತರ ಗ್ರಾಮಗಳಲ್ಲಿ ಮಳೆ ಉತ್ತಮವಾಗಿ ಸುರಿಯಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು. ನಂತರ ಮೋಡ ಕವಿದ ವಾತಾವರಣ ಉಂಟಾಗಿ ಮಳೆ ಆರಂಭವಾಯಿತು. ಮಳೆ ಉತ್ತಮವಾಗಿ ಸುರಿದಿದ್ದರಿಂದ ರೈತರಿಗೆ ಭೂಮಿ ಹದ ಮಾಡಿಕೊಳ್ಳಲು ಅನುಕೂಲವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-801642098

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.