ಸಂಡೂರು: ತಾಲ್ಲೂಕಿನ ತೋರಣಗಲ್ಲು ಗ್ರಾಮದ ಎಚ್.ಎಲ್.ಸಿ ಕಾಲುವೆ ಪಕ್ಕದಲ್ಲಿ ಹಲವು ವರ್ಷಗಳಿಂದ ವಾಸವಿರುವ ನಿವಾಸಿಗಳಿಗೆ ವಸತಿ, ನಿವೇಶನ ಕಲ್ಪಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಮುಖಂಡರು ಪ್ರತಿಭಟನೆ ನಡೆಸಿ ತೋರಣಗಲ್ಲು ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ನಾಗರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಿಪಿಎಂ ಪಕ್ಷದ ಸಂಡೂರು ತಾಲ್ಲೂಕು ಕಾರ್ಯದರ್ಶಿ ಎ.ಸ್ವಾಮಿ ಮಾತನಾಡಿ, ‘ಎಚ್ಎಲ್ಸಿ ಕಾಲುವೆ ಜಾಗದಲ್ಲಿ ವಾಸವಿರುವ ಬಡಜನರು ಮೂರು ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸುತ್ತಮುತ್ತ ಕೈಗಾರಿಕಾ ಪ್ರದೇಶವಾಗಿರುವುದರಿಂದ ಜನರು ನಿವೇಶನ ಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಕಾರಣ ಸರ್ಕಾರ ಜನರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಸಿಪಿಎಂ ಪಕ್ಷದ ಮುಖಂಡರಾದ ಜೆ.ಎಂ. ಚನ್ನಬಸಯ್ಯ, ಎಚ್.ಸ್ವಾಮಿ, ಎಸ್. ಕಾಲುಬಾ, ಶಿವಾರೆಡ್ಡಿ ಎನ್. ಶಂಕಣ್ಣ ನಾಗಭೂಷಣ, ವೇಬಾಕುಮಾರಿ, ಹುಸೇನಮ್ಮ, ಗಂಗಮ್ಮ ಲಕ್ಷ್ಮಿ, ದುರುಗಮ್ಮ, ಮರಿಯಮ್ಮ, ಸಂಸದ್ ಬೇಗಂ, ಮಂಜಮ್ಮ, ತಿಪ್ಪಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತ ಮಾಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-1164644119

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.