ಸಂಡೂರು: ‘ಗ್ರಾಮೀಣ ಪ್ರದೇಶದ ಜನರ ಹಣಕಾಸಿನ ವ್ಯವಹಾರಗಳ ಅನುಕೂಲಕ್ಕಾಗಿ, ಈ ಭಾಗದ ಹಳ್ಳಿಗಳ ಜನರ ಒತ್ತಾಯದ ಮೇರೆಗೆ ನೂತನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಆರಂಭಿಸಲಾಗಿದ್ದು, ವಿವಿಧ ಗ್ರಾಮಗಳ ಬಡ ಜನರು, ವಿದ್ಯಾರ್ಥಿಗಳು ಈ ನೂತನ ಬ್ಯಾಂಕ್ ಆರ್ಥಿಕ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಂಸದ ಇ.ತುಕಾರಾಂ ಹೇಳಿದರು.

ತಾಲ್ಲೂಕಿನ ಡಿ.ಅಂತಾಪುರ ಗ್ರಾಮದಲ್ಲಿ ಬುಧವಾರ ನೂತನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಅಖಂಡ ಬಳ್ಳಾರಿ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಿಗೆ ₹ 7ಲಕ್ಷ ವೆಚ್ಚದಲ್ಲಿ ನೂತನ ಆಧುನಿಕ, ಡಿಜಿಟಲ್ ಗ್ರಂಥಾಲಯಗಳನ್ನು ನಿರ್ಮಾಣ ಮಾಡಲಾಗುವುದು. ಶಾಲಾ ಕಾಲೇಜು ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿ ನಿರಂತರ ವಿದ್ಯಾಭ್ಯಾಸ ಮಾಡುವುದರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು’ ಎಂದರು

ಕರ್ನಾಟಕ ರಾಜ್ಯ ಆದಿರು ನಿಗಮದ ಉಪಾಧ್ಯಕ್ಷ ಎಚ್.ಲಕ್ಷ್ಮಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಬಿಇಒ ಐ.ಆರ್.ಅಕ್ಕಿ, ಸಮಾಜ ಕಲ್ಯಾಣ ಅಧಿಕಾರಿ ವೆಂಕಟೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ್, ಎಸ್ಬಿಐ ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕಿ ಸ್ಮಿತಾ, ಬ್ಯಾಂಕಿನ ಅಧಿಕಾರಿಗಳಾದ ಅಲೋಕ ಚಂದ್ರ, ರವಿ, ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪ ಗ್ರಾಮದ ಸಾರ್ವಜನಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.