ಬಳ್ಳಾರಿ: ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಜನಗಣತಿಯಲ್ಲಿ ಪರಿಗಣಿಸಬಾರದು ಎಂದು ಒತ್ತಾಯಿಸಿ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಎಸ್ಸಿ, ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಗುರುವಾರ ಪ್ರತಿಭಟನೆ ನಡೆಯಿತು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಬೇಡ ಜಂಗಮರು ಸಮಾಜದಲ್ಲಿ ಮೇಲ್ಜಾತಿಯವರೆಂದು ಗುರುತಿಸಿಕೊಂಡಿದ್ದಾರೆ. ಅವರು ದೇವಸ್ಥಾನದಲ್ಲಿ ಪೂಜೆ ಮಾಡುತ್ತಾ, ಅತ್ಯಂತ ಉನ್ನತ ಸ್ಥಾನದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಜನಾಂಗ ವೀರಶೈವ ಜಂಗಮ ಸಮುದಾಯದವರು ಎಂದು ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.

‘ದಲಿತರ ಜಾತಿಗಣತಿಯಲ್ಲಿ ತಮ್ಮ ಸಮುದಾಯವನ್ನು ಸಮೀಕ್ಷೆಗೆ ಒಳಪಡಿಸಿ ಎಂದು ಗಣಿತಿದಾರರನ್ನು ಒತ್ತಾಯಿಸುವುದು ಮತ್ತು ಅವರ ಕರ್ತವ್ಯಕ್ಕೆ ಅಡಚಣೆಯುಂಟು ಮಾಡುವ ಕೆಲಸಗಳಿಗೆ ಜಂಗಮರು ಮುಂದಾಗಿದ್ದಾರೆ. ವೀರಶೈವ ಜಂಗಮರನ್ನು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಜನಗಣತಿಯಲ್ಲಿ ಪರಿಗಣಿಸಬಾರದು’ ಎಂದು ಒತ್ತಾಯಿಸಿದರು.

ಈ ಹಿಂದೆ ಕರ್ನಾಟಕದಲ್ಲಿ ವೀರಶೈವ ಜಂಗಮರು ತಮ್ಮನ್ನು ‘ಬೇಡ ಜಂಗಮರು’ ಎಂದು ಕರೆದುಕೊಳ್ಳುತ್ತಾ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಈ ವೀರಶೈವ ಜಂಗಮರು ‘ಬೇಡ ಜಂಗಮ’ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದದ್ದನ್ನು ವಿರೋಧಿಸಿ ಆನೇಕ ಪ್ರತಿಭಟನೆಗಳು ನಡೆದ ಬಳಿಕ ಪ್ರವರ್ಗವಾರು ಪಟ್ಟಿಯನ್ನು ಹೊರಡಿಸಿತು. ಸರ್ಕಾರ ಈ ಆದೇಶವನ್ನು ಹೊರಡಿಸಿದ ನಂತರವೂ ವೀರಶೈವ ಜಂಗಮ ಸಮುದಾಯದವರು ವಾಮಮಾರ್ಗಗಳ ಮೂಲಕ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಯತ್ನಿಸುತ್ತಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾರಿಗೆ ಸೇರುವ ‘ಬುಡ್ಗ ಜಂಗಮ’ರಾದ ನಮಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಗಂಗಾಧರ, ಗೂಳೆಪ್ಪ, ಕೊಂಡಪ್ಪ, ನಾಗೇಶ್ ಬಾಬು, ಅಜ್ಜಪ್ಪ, ರಾಮಾಂಜಿನಿ ಸೇರಿ ಬುಡ್ಗಜಂಗಮ ಸಮುದಾಯದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.