ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಸಮಾವೇಶಕ್ಕೆ ವೇದಿಕೆ ಸಜ್ಜು

Published 10 ಮಾರ್ಚ್ 2024, 14:47 IST
Last Updated 10 ಮಾರ್ಚ್ 2024, 14:47 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಾರ್ಚ್ 11ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಂಡಿದೆ.

ಬೆಳಿಗ್ಗೆ 11 ಗಂಟೆಗೆ ನಗರದ ಮೋಕಾ ರಸ್ತೆಯ ಸುವರ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ಫಲಾನುಭವಿಗಳು, ಸಾರ್ವಜನಿಕರು ಪಾಲ್ಗೊಳ್ಳಲು ಅಗತ್ಯ ಬಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಮಾಡಿದೆ. 

ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಫಲಾನುಭವಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT