ಹೂವಿನಹಡಗಲಿ: ತಾಲ್ಲೂಕಿನ ಕೊಟ್ನಿಕಲ್ ಸುಕ್ಷೇತ್ರದಲ್ಲಿ ಗುರುವಾರ ಮಕರ ಸಂಕ್ರಾಂತಿಯಂದು ಶಂಕರಲಿಂಗೇಶ್ವರ ಸ್ವಾಮಿ ರಥೋತ್ಸವ ವೈಭವದಿಂದ ಜರುಗಿತು.

ದೇವಸ್ಥಾನದಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಸರ್ವಾಲಂಕೃತ ರಥಕ್ಕೆ ಪೂಜೆ ಸಲ್ಲಿಸಲಾಯಿತು. ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು. ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.

ಹೊನ್ನಾಳಿಯ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಪುರದ ಸಿದ್ದವೀರ ಶಿವಾಚಾರ್ಯರು, ಗವಿಮಠದ ಹಿರಿಶಾಂತವೀರ ಸ್ವಾಮೀಜಿ, ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಂಕರಲಿಂಗೇಶ್ವರ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಹೂವಿನಹಡಗಲಿ, ಕಾಗನೂರು, ನವಲಿ, ಸುತ್ತಮುತ್ತಲ ಗ್ರಾಮಗಳ ಅಪಾರ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಬೆಳಿಗ್ಗೆ ದೇವಸ್ಥಾನದಲ್ಲಿ ಶಂಕರಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸೋಗಿಯ ಎ.ಎಂ.ಹಾಲಯ್ಯ ಶಾಸ್ತ್ರಿ ಪೂಜಾ ಕೈಂಕರ್ಯ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.