ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣಬಸವೇಶ್ವರ ಜಾತ್ರಾ ಮಹೋತ್ಸವ ಸಂಪನ್ನ

Published 30 ಮಾರ್ಚ್ 2024, 15:39 IST
Last Updated 30 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ತೆಕ್ಕಲಕೋಟೆ: ಸಮೀಪದ ಭೈರಾಪುರ ಗ್ರಾಮದ ಶರಣಬಸವೇಶ್ವರ ಜಾತ್ರಾ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಬ್ರಾಹ್ಮಿ ಮುಹೋರ್ತದಲ್ಲಿ ಕಳಸ-ಕನ್ನಡಿಗಳೊಂದಿಗೆ ಗಂಗೆ ತಂದು ಈಶ್ವರ ದೇವಸ್ಥಾನದಲ್ಲಿ ಅಭಿಷೇಕ ಸಹಸ್ರ ಬಿಲ್ವಾರ್ಚನೆ ನಂತರ ಕೊಂಚಗೇರಿ ಶಿವಪ್ಪ ತಾತ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿದವು. ಸಂಜೆ ಸಕಲ ವಾದ್ಯ ವೈಭವಗಳೊಡನೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ಹಗ್ಗ ಹಿಡಿದು ರಥವನ್ನು ಎಳೆಯುತ್ತಿದ್ದಂತೆ ನೆರೆದ ಭಕ್ತಸಾಗರ ಹೂಹಣ್ಣು-ಉತ್ತುತ್ತಿ ರಥಕ್ಕೆ ಎಸೆದು ಭಕ್ತಿ ಮೆರೆದರು. ರಥವು ಈಶ್ವರ ದೇವಸ್ಥಾನದಿಂದ ನಾಗಪ್ಪನ ಕಟ್ಟೆ ವರೆಗೆ ಸಾಗಿ ಮತ್ತೆ ಸ್ವಸ್ಥಾನಕ್ಕೆ ಮರುಳಿತು.
ಭೈರಾಪುರ, ಕರೂರು, ದರೂರು, ಸಿರಿಗೇರಿ, ಶಾನವಾಸಪುರ ಸೇರಿದಂತೆ ಸುತ್ತಲಿನ ಹಲವು ಗ್ರಾಮಗಳ ಭಕ್ತಾದಿಗಳು ಭಾಗವಹಿಸಿದ್ದರು.
 

ತೆಕ್ಕಲಕೋಟೆ ಸಮೀಪದ ಭೈರಾಪುರ ಗ್ರಾಮ ಶರಣ ಬಸವೇಶ್ವರ ಜಾತ್ರಾ ಮಹೋತ್ಸವ ಜರುಗಿತು
ತೆಕ್ಕಲಕೋಟೆ ಸಮೀಪದ ಭೈರಾಪುರ ಗ್ರಾಮ ಶರಣ ಬಸವೇಶ್ವರ ಜಾತ್ರಾ ಮಹೋತ್ಸವ ಜರುಗಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT