ಕಂಪ್ಲಿ: ಪಟ್ಟಣದ ಪೇಟೆಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಈಚೆಗೆ ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ 119ನೇ ಜಯಂತ್ಯುತ್ಸವ ಆಚರಿಸಲಾಯಿತು.

ವೀರಶೈವ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ. ನಾಗರಾಜ ಮಾತನಾಡಿ, ‘ಕಾಯಕ, ಶಿಕ್ಷಣ ಹಾಗೂ ದಾಸೋಹಕ್ಕೆ ಮಹತ್ವ ನೀಡಿ, ಸಮಾಜವನ್ನು ಪರಿವರ್ತಿಸುವಲ್ಲಿ ಶಿವಕುಮಾರ ಶ್ರೀಗಳು ಶ್ರಮಿಸಿದರು. ಈ ಪರಂಪರೆ ಇಂದಿಗೂ ಮುಂದುವರಿದಿದೆ. ಇವರ ಮಹತ್ತರ ಸೇವೆ ಪರಿಗಣಿಸಿ ಭಾರತ ರತ್ನ ನೀಡಲು ಕೇಂದ್ರ ಸರ್ಕಾರ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು.

ಪಟ್ಟಣದ ರಸ್ತೆ, ವೃತ್ತಕ್ಕೆ ಶ್ರೀಗಳ ಹೆಸರಿಡುವಂತೆ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಪ್ರಮುಖರಾದ ಶರಣಪ್ಪ ಸಜ್ಜನ, ಮಂಜುನಾಥ ಸಜ್ಜನರ, ವಿಶ್ವನಾಥ ಸಜ್ಜನರ, ವಾಲಿ ಕೊಟ್ರಪ್ಪ, ಕೆ.ಎಂ. ಚಂದ್ರಶೇಖರ, ಇಂದ್ರಜಿತ್ಸಿಂಗ್, ಕೆ.ಸಿ. ಸಿದ್ದರಾಮೇಶ್ವರ, ಎಸ್.ಎಂ. ಗುರುಪ್ರಸನ್ನ, ಜಿ. ಚಂದ್ರಶೇಖರಗೌಡ, ಬಿ.ವಿ. ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-25-1885913288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.