ಸಿರುಗುಪ್ಪ: ತಾಲ್ಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಭಾನುವಾರ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ವಿಜಯ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ತೆಕ್ಕಲಕೋಟೆಯಿಂದ ಸಿರುಗುಪ್ಪ ಮಾರ್ಗವಾಗಿ 35 ರಿಂದ 40 ಕೆಜಿ ತೂಕದ 50 ಚೀಲಗಳಲ್ಲಿ ₹48,500 ಮೌಲ್ಯದ ಪಡಿತರ ಅಕ್ಕಿ ಹಾಗೂ ಬಂಡ್ರಾಲ್ ಗ್ರಾಮದಿಂದ ಸಿಂಧನೂರು ಕಡೆಗೆ ಗೂಡ್ಸ್ ವಾಹನದಲ್ಲಿ 35 ರಿಂದ 40 ಕೆಜಿ ತೂಕದ 90 ಚೀಲಗಳಲ್ಲಿ ₹87, ₹250 ಸೇರಿದಂತೆ ಒಟ್ಟು ₹1,35,750 ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕರಾದ ಮಹೇಶ್ ಹಾಗೂ ರಜಾಕ್ ಅಲಿ ಇವರ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-25-1244071763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.