ಸಿರುಗುಪ್ಪ: ತಾಲ್ಲೂಕಿನ ನಾಗರಹಾಳು ಗ್ರಾಮದ ಬೃಹನ್ಮಠದಲ್ಲಿ ಏಕೀಕರಣ ಹೋರಾಟಗಾರರಾದ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಬುಧವಾರ 6 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಪರಮಪೂಜ್ಯ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಸೌಹಾರ್ದತೆ, ಸಾಮರಸ್ಯ ಹಾಗೂ ಬಾಂಧವ್ಯ ಬೆಳೆಯಲಿದೆ’ ಎಂದರು.

ಬಸವಲಿಂಗ ಸ್ವಾಮೀಜಿ ಮಾತನಾಡಿದರು. ಪುಣ್ಯಾರಾಧನೆ ಅಂಗವಾಗಿ ಹಮ್ಮಿಕೊಂಡಿದ್ದ ಎಡೆಯೂರ ಸಿದ್ಧಲಿಂಗ ಶಿವಯೋಗಿಗಳ ಪುರಾಣ ಪ್ರವಚನ ಮಹಾಮಂಗಲಗೊಂಡಿತು.

ಗಡಿನಾಡ ಕನ್ನಡ ಸಾಹಿತಿ ನಾ.ಮ. ಮರುಳಾರಾಧ್ಯರ ಪುರಾಣ ಪ್ರವಚನಕ್ಕೆ ಎನ್.ಎಂ. ಜಗದೀಶ ಗವಾಯಿಗಳ ಪುರಾಣ ವಾಚನ ಮತ್ತು ಹಾರ್ಮೋನಿಯಂ, ಧಾರವಾಡ ಪ್ರಸನ್ನಕುಮಾರ್ ಹಿರೇಮಠ ವಯೊಲಿನ್ ಮತ್ತು ಬಸವರಾಜ ಹೂಗಾರ್ ತಬಲಾಸಾಥ್ ನೀಡಿದರು.

ಮಠದಲ್ಲಿ ಕರ್ತೃ ಗದ್ದುಗೆಗೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು. ಕಾರ್ಯಕ್ರಮಕ್ಕೆ ಸಹಕರಿಸಿದ ಭಕ್ತರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ‘ಸಾಗರದಮ್ಮದೇವಿ’ ಕೃತಿ ಬಿಡುಗಡೆ ಮಾಡಲಾಯಿತು.

ವಿವಿಧ ಮಠಗಳ ಶ್ರೀಗಳು, ಹರಗುರು ಚರಮೂರ್ತಿಗಳು, ಶ್ರೀಮಠದ ಬಸವರಾಜಯ್ಯ ತಾತನವರು, ಶ್ರೀಶರಣ ದೊಡ್ಡಯ್ಯತಾತನವರ ಶಿವಾನುಭವ ಟ್ರಸ್ಟ್ ಪದಾಧಿಕಾರಿಗಳು, ಸಿರುಗುಪ್ಪ ತಾಲ್ಲೂಕಿನ ಮುಖಂಡರು, ನಾಗರಹಾಳು ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳ ಶ್ರೀಮಠದ ಭಕ್ತರು ಭಾಗವಹಿಸಿದ್ದರು.

ಸಂಜೆ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ಸಂಭ್ರಮದಿಂದ ಜರುಗಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-25-1356136618

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.