ಸಿರುಗುಪ್ಪ: ‘ವೈದ್ಯರಷ್ಟೇ ಮಹತ್ವದ ಪಾತ್ರವನ್ನು ಶುಶ್ರೂಷಕರು ನಿರ್ವಹಿಸುತ್ತಾರೆ. ಕರುಣೆ, ಸಹನೆ ಮತ್ತು ಸೇವಾ ಮನೋಭಾವದಿಂದ ಅವರು ಸಮಾಜಕ್ಕೆ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಆರೋಗ್ಯ ಕ್ಷೇತ್ರದ ನಿಜವಾದ ಬೆನ್ನೆಲುಬು ಶುಶ್ರೂಷಕರು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಹೇಳಿದರು.

ನಗರದ ತಾಲ್ಲೂಕು ವೈದ್ಯಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದಮ್ಮೂರು ಬಸವರಾಜ್ ಮಾತನಾಡಿ, ‘ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಶುಶ್ರೂಷಕರ ಸೇವೆ ಅನನ್ಯವಾಗಿದೆ. ತುರ್ತು ಪರಿಸ್ಥಿತಿಯಲ್ಲೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವುದು ಶ್ಲಾಘನೀಯ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಠಕದ ಅಧ್ಯಕ್ಷ ಮಧುಸೂದನ ಕಾರಿಗನೂರ ಅವರು, ವೈದ್ಯಕೀಯ ಸಿಬ್ಬಂದಿ ಮೇಲೆ ಹೆಚ್ಚುತ್ತಿರುವ ಹಲ್ಲೆ ನಿಯಂತ್ರಣ ಕುರಿತ ಕಾನೂನಿನ ಬಗ್ಗೆ ಮಾಹಿತಿ ನೀಡಿದರು.

ವಿವಿಧ ಆಸ್ಪತ್ರೆಗಳ ಶುಶ್ರೂಷಕರನ್ನು ಸನ್ಮಾನಿಸಲಾಯಿತು. ಹಾಸ್ಯ ಕಲಾವಿದ ನರಸಿಂಹಮೂರ್ತಿ ಜೆ. ಅವರು ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ, ಸ್ತ್ರೀರೋಗ ತಜ್ಞೆ ಪ್ರಭಾವತಿ ಕಾರಿಗನೂರು, ಗಂಗಮ್ಮ, ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-25-220236680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.