ಸಿರುಗುಪ್ಪ: ‘ತಂಬಾಕು ಉತ್ಪನ್ನಗಳ ಸೇವನೆ ತ್ಯಜಿಸಿ, ಆರೋಗ್ಯಕರ ಮತ್ತು ಸ್ವಸ್ಥ ಜೀವನಶೈಲಿ ಅಳವಡಿಸಿಕೊಳ್ಳಬೇಕು’ ಎಂದು ಹಾಸ್ಯ ಕಲಾವಿದ ಜೆ.ನರಸಿಂಹಮೂರ್ತಿ ಹೇಳಿದರು.

ನಗರದ ಯಲ್ಲಮ್ಮ ದೇವಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ನಡೆದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆಯಲ್ಲಿ ಮಾತನಾಡಿದರು.

‘ತಂಬಾಕು ಸೇವನೆಯಿಂದ ಮಾರಕ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಿಸುವ ಸಂಕಲ್ಪ ಮಾಡೋಣ. ಯುವ ಸಮುದಾಯವು ದುಶ್ಚಟಗಳಿಗೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.

ಈ ವೇಳೆ ಸಂಸ್ಥೆಯ ಕೃಷಿ ಮೇಲ್ವಿಚಾರಕ ವೀರೇಶ ಸೋಮನಾಳ, ಶಾಲೆಯ ಅಧ್ಯಕ್ಷ ವೈ.ಡಿ. ವೆಂಕಟೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರೀಯಾ, ಸೇವಾಪ್ರತಿನಿಧಿ ಲಕ್ಷ್ಮಿ, ತಸ್ಲೀಮ್, ಸಿ.ಎಸ್.ಸಿ ಶರೀಪ್ ಸೇವಾದಾರ, ತಬಸುಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-655985590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.