ಹೂವಿನಹಡಗಲಿ: ತಾಲ್ಲೂಕಿನ ಹೊನ್ನನಾಯಕನಹಳ್ಳಿಯಲ್ಲಿ ಹಾವು ಕಡಿದು ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಸೋಮವಾರ ಜರುಗಿದೆ.
ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಜಹಿರಾಬೀ ಹಾರೋಗೇರಿ (15) ಮೃತ ವಿದ್ಯಾರ್ಥಿನಿ.
ತನ್ನ ತಾಯಿಯೊಂದಿಗೆ ಹೊಲಕ್ಕೆ ಹೋಗಿದ್ದ ವೇಳೆ ಹಾವು ಕಡಿದಿದೆ. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.