ಮಂಗಳವಾರ, ನವೆಂಬರ್ 29, 2022
21 °C

ಸಂಸತ್ ಭವನದಲ್ಲಿ ಅ.2ಕ್ಕೆ ಭಾಷಣಕ್ಕೆ ತೆಕ್ಕಲಕೋಟೆಯ ಅಖಿಲಾ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ಸಿರುಗುಪ್ಪ ಸದಾಶಿವನಗರದ ನಿವಾಸಿ ಎಚ್.ಶ್ರೀದೇವಿ ಮತ್ತು ಎಚ್.ಮಂಜುನಾಥ ಇವರ ಪುತ್ರಿ ಅಖಿಲಾ ಎಚ್, ಅ.2ರ ಗಾಂಧಿ ಜಯಂತಿಯಂದು ದೆಹಲಿಯ ಸಂಸತ್ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಭಾಷಣ ಮಾಡಲಿದ್ದಾರೆ.

ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಖಿಲಾ, ಕೊಪ್ಪಳದ ಜಗದ್ಗುರು ಶ್ರೀಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕ ಪ್ರತಿನಿಧಿಸುತ್ತಿದ್ದು, ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ‘ನನ್ನ ಮೇಲೆ ಪ್ರಭಾವ ಬೀರಿದ ರಾಷ್ಟ್ರೀಯ ಸ್ವಾತಂತ್ರ್ಯ ನಾಯಕರು’ ವಿಷಯ ಕುರಿತು ಅವರು  ಮಾತನಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.