ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಎಸ್ಸೆಸ್ಸೆಲ್ಸಿ ಪರೀಕ್ಷೆ: ಕನ್ನಡಕ್ಕೆ 265 ವಿದ್ಯಾರ್ಥಿಗಳು ಗೈರು

Published 25 ಮಾರ್ಚ್ 2024, 15:58 IST
Last Updated 25 ಮಾರ್ಚ್ 2024, 15:58 IST
ಅಕ್ಷರ ಗಾತ್ರ

ಬಳ್ಳಾರಿ: ಪ್ರಸ್ತಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಜಿಲ್ಲೆಯ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ.

ಮಾ.25 ರಂದು ಸೋಮವಾರ ಕನ್ನಡ ಭಾಷಾ ವಿಷಯ ಪರೀಕ್ಷೆ ನಡೆದಿದ್ದು, ಜಿಲ್ಲೆಯಲ್ಲಿ 21,461 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.  ಈ ಪೈಕಿ 21,196 ವಿದ್ಯಾರ್ಥಿಗಳು ಹಾಜರಾಗಿದ್ದು, 265 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಆಡಳಿತ) ಉಮಾದೇವಿ ಅವರು ತಿಳಿಸಿದ್ದಾರೆ.

ಬಳ್ಳಾರಿ ಪೂರ್ವ–89, ಸಂಡೂರು–43, ಸಿರುಗುಪ್ಪ–53, ಬಳ್ಳಾರಿ ಪಶ್ಚಿಮ–80 ಮಂದಿ ಗೈರಾಗಿದ್ದರು ಎಂದು ಇಲಾಖೆ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT