ಸಂಡೂರು: 'ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯು ಬಸ್ಗಳನ್ನು ಸಕಾಲಕ್ಕೆ ಸಮರ್ಪಕವಾಗಿ ಒದಗಿಸಬೇಕು' ಎಂದು ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ನೂರುದ್ದೀನ್ ಎಸ್. ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿಯ ಎಂ. ವೈ. ಘೋರ್ಪಡೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಂಡೂರು ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಸಾವಿರಾರು ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆಯುತ್ತಿದ್ದು ಮಕ್ಕಳ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್ ಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಯುವನಿಧಿ ನೋಂದಣಿ 2024-25 ನೇ ಸಾಲಿನಲ್ಲಿ ಒಟ್ಟು 832 ಅಭ್ಯರ್ಥಿಗಳು ನೋಂದಾಣಿಯಾಗಿದ್ದು ಪ್ರಸ್ತುತ ಸಾಲಿನ 2025-26 ರಲ್ಲಿ ಒಟ್ಟು 624 ಅಭ್ಯರ್ಥಿಗಳು ಮಾತ್ರ ನೊಂದಣಿಯಾಗಿದ್ದು ತೀರಾ ಕಳಪೆಯ ಪ್ರಗತಿ ಕಂಡುಬರುತ್ತಿದ್ದು ಅಧಿಕಾರಿಗಳು ಯುವ ನಿಧಿಯ ಯೋಜನೆ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸಭೆಯಲ್ಲಿದ್ದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ಜೂನ್ ತಿಂಗಳಲ್ಲಿ ಎಲ್ಲ ಕಾಲೇಜುಗಳಿಗೆ ತೆರಳಿ ಶೇ100ರಷ್ಟು ನೋಂದಣಿ ಮಾಡಬೇಕು ಇಲ್ಲದಿದ್ರೆ ಉದ್ಯೋಗ ವಿನಮಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಮಾತನಾಡಿ, ’ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಬಡ ಜನರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಅಂತಹ ಜನರ ಕಾರ್ಡ್ ಗಳನ್ನು ರದ್ದು ಮಾಡಲು ಅಧಿಕಾರಿಗಳು ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಆಶಾಲತಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ಯಾರಂಟಿಯ ಯೋಜನೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.