ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಸಹಕಾರ ಸಪ್ತಾಹ ನಾಳೆ

ಸಹಕಾರ ಚಳವಳಿಯ ಚರ್ಚೆ, ಚಿಂತನ–ಮಂಥನ ಗೋಷ್ಠಿಗಳು
Last Updated 18 ನವೆಂಬರ್ 2020, 1:42 IST
ಅಕ್ಷರ ಗಾತ್ರ

ಹೊಸಪೇಟೆ: ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಗರದ ಮುನ್ಸಿಪಲ್ ಮೈದಾನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಜೆ.ಎಂ.ಶಿವಪ್ರಸಾದ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಬೆಳೆದು ಬಂದ ರೀತಿ ಹಾಗೂ ಮುಂದೆ ಆಗಬೇಕಾಗಿರುವ ಬದಲಾವಣೆ ಸೇರಿದಂತೆ ಸಹಕಾರ ಚಳವಳಿಯ ಚರ್ಚೆ ಮತ್ತು ಚಿಂತನ ಮಂಥನಗಳು ಏಳು ದಿನಗಳ ಕಾಲ ನಡೆಯಲಿವೆ ಎಂದರು.

ಅಂದು ಬೆಳಿಗ್ಗೆ 9.30ಕ್ಕೆ ಎತ್ತಿನ ಬಂಡಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ 108 ಎತ್ತಿನ ಬಂಡಿಗಳು ಭಾಗವಹಿಸಲಿವೆ. ನಗರದ ವಡಕರಾಯ ದೇವಸ್ಥಾನದಿಂದ ಸಕಲ ವಾದ್ಯಗಳ ಸಮೇತ ಆರಂಭವಾಗುವ ಮೆರವಣಿಗೆ ಮುನ್ಸಿಪಲ್ ಮೈದಾನವರೆಗೆ ನಡೆಯಲಿದ್ದು, ಜಿಲ್ಲಾ ಉಸ್ತವಾರಿ ಸಚಿವ ಆನಂದ್‌ಸಿಂಗ್ ಚಾಲನೆ ನೀಡಲಿದ್ದಾರೆ.

ಇನ್ನು ಎತ್ತಿನ ಬಂಡಿ ಉತ್ಸವದಲ್ಲಿ ಅತ್ಯುತ್ತಮವಾಗಿ ಅಲಂಕರಿಸಿದ ಎತ್ತಿನ ಬಂಡಿಗೆ ಮೊದಲ ಬಹುಮಾನವಾಗಿ ₹25ಸಾವಿರ , ಎರಡನೇ ಬಹುಮಾನ ₹15 ಸಾವಿರ ಮತ್ತು ಮತ್ತು ಮೂರನೇ ಬಹುಮಾನ ₹10ಸಾವಿರ ನಗದು ನೀಡಲಾಗುತ್ತಿದ್ದು, ಅರಣ್ಯ ಸಚಿವ ಆನಂದ್ ಸಿಂಗ್ ಅವರು ವೈಯಕ್ತಿಕವಾಗಿ ಈ ಬಹುಮಾನ ನೀಡಲಿದ್ದಾರೆ. ಅಲ್ಲದೆ ಉತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲಾ ಎತ್ತಿನ ಬಂಡಿಗಳಿಗೆ ₹2,500ಗಳನ್ನು ಕೂಡ ಅವರೇ ನೀಡಲಿದ್ದಾರೆ ಎಂದು ತಿಳಿಸಿದರು.

ನಂತರ ನಡೆಯುವ ಕಾರ್ಯಕ್ರಮವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಸಚಿವ ಆನಂದ್ ಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಸಹಕಾರ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. ವಿಶೇಷ ಅಹ್ವಾನಿತರಾಗಿ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕರು, ಸಂಸದರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಟಿ.ಎಂ.ಚಂದ್ರಶೇಖರಯ್ಯ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಎಲ್.ಎಸ್.ಆನಂದ್, ಬಿ.ಕೆ.ನಾಗರಾಜರಾವ್, ಲಿಯಾಕತ್ ಅಲಿ, ಶರಣಬಸಪ್ಪ, ನಾಗರಾಜ ಪಾಟೀಲ್, ಶಂಕರ್ ನಾಯಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT