ಮರಿಯಮ್ಮನಹಳ್ಳಿ: ‘ಏನ್ರೀ ರಾಜ್ಯದ ಎಲ್ಲ 32 ಜಿಲ್ಲೆಯ 1400ಮಕ್ಕಳು ಭಾಗವಹಿಸುವ ರಾಜ್ಯ ಮಟ್ಟದ ಪಂದ್ಯಾವಳಿಯಾಗಿದ್ದು, ಪಂದ್ಯಾವಳಿ ನಡೆಯಲು ಕೇವಲ 3 ಬಾಕಿ ಉಳಿದಿದ್ದರೂ ಸೂಕ್ತ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿಲ್ಲವೇಕೆ?‘ ಎಂದು ಶಾಸಕ ಕೆ.ನೇಮರಾಜ ನಾಯ್ಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದಲ್ಲಿ ನ.7ರಿಂದ ಮೂರು ದಿನಗಳ ಕಾಲ 14 ಹಾಗೂ 17ವರ್ಷ ವಯೋಮಿತಿ ಒಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ವಿನಾಯಕ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕುಸ್ತಿ ಪಂದ್ಯಾವಳಿಯ ಬಗ್ಗೆ ಡಿಡಿಪಿಐ ಅವರಿಂದ ಮಾಹಿತಿ ಪಡೆದ ಅವರು, 1400ವಿದ್ಯಾರ್ಥಿಗಳಿಗೆ ಊಟ, ವಸತಿ ಹಾಗೂ ಸಾರಿಗೆ ಸೌಕರ್ಯದ ಬಗ್ಗೆ ಸರಿಯಾದ ಸಿದ್ಧತೆ ಮಾಡಿಕೊಳ್ಳದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿವಿಧ ಜಿಲ್ಲೆಗಳಿಂದ ಆಗಮಿಸುವ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.

ಪ್ರಗತಿ ಪರಿಶೀಲನಾ ಸಭೆ: ನಂತರ ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಯೋಜನೆಗಳ ಬಗ್ಗೆ ಹಾಗೂ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ರೈತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿಪಿಐ ತರಾಟೆಗೆ ತೆಗೆದುಕೊಂಡ ಶಾಸಕ

‘ಇದು ರಾಜ್ಯ ಮಟ್ಟದ ಕಾರ್ಯಕ್ರಮ ಈ ಹಿನ್ನೆಲೆಯಲ್ಲಿ ಸಭೆ ನಡೆಯುತ್ತಿದ್ದರೂ ಸ್ಥಳೀಯ ಪಿಎಸ್ಐ ಆಗಲಿ ಡಿವೈಎಸ್ಪಿ ಆಗಲಿ ಸಭೆಗೆ ಬರದಿದ್ದರೆ ಹೇಗೆ ಇನ್ನು ಹೇಗೆ ಬಂದೋಬಸ್ತ್ ನಿರ್ವಹಿಸುತ್ತೀರಿ’ ಎಂದು ಸಿಪಿಐ ವಿಕಾಸ್ ಲಮಾಣಿ ಅವರನ್ನು ಶಾಸಕ ಕೆ.ನೇಮರಾಜನಾಯ್ಕ ಅವರು ತರಾಟೆಗೆ ತೆಗೆದುಕೊಂಡರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ ಅವರು ಸಹ ಪಿಎಸ್ಐ ತಾರಾಬಾಯಿ ಅವರು ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಮ್ಮ ಬಳಿ ಸರಿಯಾಗಿ ಸಂಪರ್ಕ ಮಾಡುತ್ತಿಲ್ಲ ಎಂದು ದೂರಿದ್ದಕ್ಕೆ ಸಿಟ್ಟಾದ ಸಿಪಿಐ ಅವರು ಕಾರ್ಯಕ್ರಮ ನಿಮಿತ್ತ ಹೋಗಿದ್ದು ಅವರ ಬಗ್ಗೆ ವೈಯಕ್ತಿಕವಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದಕ್ಕೆ ಸಿಪಿಐ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಇದು ವೈಯಕ್ತಿಕ ವಿಚಾರ ಅಲ್ಲ ಇದು ಸರ್ಕಾರಿ ಕಾರ್ಯಕ್ರಮ. ಅವರು ತಾಲ್ಲೂಕು ದಂಡಾಧಿಕಾರಿಗಳು ಬಂದೋಬಸ್ತ್ ವಿಚಾರಕ್ಕೆ ಮಾತನಾಡಿದ್ದು ಅವರೇ ಇಲ್ಲ ಎಂದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಈ ಬಗ್ಗೆ ಎಸ್ಪಿ ಅವರ ಗಮನಕ್ಕೆ ತರುವಂತೆ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.