ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಆನ್‌ಲೈನ್‌ನಲ್ಲಿ ₹39.57 ಲಕ್ಷ ವಂಚನೆ

Published 26 ಮೇ 2024, 15:43 IST
Last Updated 26 ಮೇ 2024, 15:43 IST
ಅಕ್ಷರ ಗಾತ್ರ

ಬಳ್ಳಾರಿ: ಷೇರು ಮಾರುಕಟ್ಟೆ ವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ಕೊಡುವುದಾಗಿ ನಂಬಿಸಿ ಬಳ್ಳಾರಿ ನಗರದ ವ್ಯಕ್ತಿಯೊಬ್ಬರಿಗೆ ಆನ್‌ಲೈನ್‌ನಲ್ಲಿ ₹39.57 ಲಕ್ಷ ವಂಚಿಸಲಾಗಿದೆ. 

ಈ ಸಂಬಂಧ ವ್ಯಕ್ತಿ ಬಳ್ಳಾರಿಯ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದು, ಅಪರಿಚಿತರ ವಿರುದ್ಧ ಪೊಲೀಸರು ವಂಚನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ–2000 ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.  

ಕಳೆದ ಮಾರ್ಚ್‌ 8ರಂದು ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಅಪರಿಚಿತರಿಂದ ಸಂದೇಶವೊಂದು ಬಂದಿದೆ. ತಮ್ಮಲ್ಲಿ ಶೇರು ವಹಿವಾಟು ನಡೆಸಿದರೆ ಅತಿ ಹೆಚ್ಚು ಲಾಭ ಕೊಡುವುದಾಗಿ ವ್ಯಕ್ತಿಯನ್ನು ನಂಬಿಸಲಾಗಿದೆ. ಬಳಿಕ ಏ.5ರಿಂದ ಮೇ 6ರ ವರೆಗೆ ಅವರಿಂದ  ಹಂತ ಹಂತವಾಗಿ ₹39,57,542 ಹಣವನ್ನು ತಮ್ಮ ಖಾತೆಗಳಿಗೆ ಹಾಕಿಸಿಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT