ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಹೆಣ್ಣಿನ ಮೇಲಿನ ದೌರ್ಜನ್ಯ ನಿಲ್ಲಬೇಕು: ಆರ್‌ಜೆ ಅಂಕಿತಾ

Last Updated 26 ಮಾರ್ಚ್ 2023, 16:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಮಾಜ ಹೆಣ್ಣನ್ನು ಗೌರವದಿಂದ ಕಾಣಬೇಕು. ಲಿಂಗದ ಕಾರಣಕ್ಕಾಗಿ ಆಕೆ ಮೇಲೆ ನಡೆಯುವ ಅತ್ಯಾಚಾರ, ಹಿಂಸೆ ಸೇರಿದಂತೆ ಎಲ್ಲಾ ದೌರ್ಜನ್ಯಗಳನ್ನು ನಿಲ್ಲಿಸಬೇಕು’ ಎಂದು ಆರ್‌ಜೆ ಅಂಕಿತಾ ಹೇಳಿದರು.

ನಗರದ ಕುಸುಗಲ್ ರಸ್ತೆಯಲ್ಲಿರುವ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆಯ ಹುಬ್ಬಳ್ಳಿ ಶಾಖೆಯಲ್ಲಿ ಇತ್ತೀಚೆಗೆ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹೆಣ್ಣು ಕೇವಲ ಮನೆ ಮತ್ತು ಮಕ್ಕಳ ಪಾಲನೆಗೆ ಸೀಮಿತವಾಗದೆ ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ತನ್ನ ಸ್ವಾಭಿಮಾನ, ಸ್ಥಾನಮಾನ ಹಾಗೂ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಬೇಕು’ ಎಂದರು.

ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ್ ಪಿಸೆ ಸ್ವಾಗತಿಸಿದರು. ಪ್ರೇಕ್ಷಾ ಜೈನ್ ಹಾಗೂ ಅಕ್ಷತಾ ಹುನಗುಂದ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಮಾಡಿದರು. ಸಂಸ್ಥೆಯ ಕಾರ್ಯದರ್ಶಿ ಧನಪಾಲ್ ಮುನ್ನೋಳ್ಳಿ, ಪದಾಧಿಕಾರಿಗಳು, ಸದಸ್ಯರು ಹಾಗೂ ಲೆಕ್ಕ ಪರಿಶೋಧಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT