‘ಸ್ಟೂಡೆಂಟ್ ಪೊಲೀಸ್ ಕೆಡೆಟ್’ ಆರಂಭ

ಹೊಸಪೇಟೆ (ವಿಜಯನಗರ): ಪ್ರಸಕ್ತ ಸಾಲಿನ ‘ಸ್ಟೂಡೆಂಟ್ ಪೊಲೀಸ್ ಕೆಡೆಟ್’ ಕಾರ್ಯಕ್ರಮ ನಗರದ ಟಿ.ಬಿ.ಡ್ಯಾಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಆರಂಭಗೊಂಡಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಅವರು ಕಾರ್ಯಕ್ರಮ ಉದ್ಘಾಟಿಸಿ, ಶಾಲಾ ಮಕ್ಕಳಿಗೆ ಪೊಲೀಸ್ ಇಲಾಖೆಯ ಬಗ್ಗೆ ತಿಳಿವಳಿಕೆ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.
ಆಯ್ದ 15 ಶಾಲೆಗಳ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ, ಪೊಲೀಸ್ ಇನ್ಸ್ಪೆಕ್ಟರ್ ಹುಲುಗಪ್ಪ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್ ಇದ್ದರು. ಪೊಲೀಸ್ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.