ಬುಧವಾರ, 2 ಜುಲೈ 2025
×
ADVERTISEMENT
ADVERTISEMENT

‘ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣಕ್ಕೆ ಕ್ರಮವಹಿಸಿ’

Published : 5 ಜೂನ್ 2025, 15:45 IST
Last Updated : 5 ಜೂನ್ 2025, 15:45 IST
ಫಾಲೋ ಮಾಡಿ
0
‘ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣಕ್ಕೆ ಕ್ರಮವಹಿಸಿ’
ಸಂಡೂರು ತಾಲ್ಲೂಕಿನ ನಿಡುಗುರ್ತಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ತಾಲ್ಲೂಕು ಆಡಳಿತ, ಅರಣ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಶಾಸಕಿ ಅನ್ನಪೂರ್ಣ ತುಕಾರಾಂ ಅವರು ಸಸಿ ನೆಟ್ಟರು

ಸಂಡೂರು: ‘ಪಟ್ಟಣ ಸೇರಿದಂತೆ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣಕ್ಕಾಗಿ ತಾಲ್ಲೂಕುಮಟ್ಟದ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸಬೇಕು. ‌ಒಂದು ತಿಂಗಳ ಕಾಲ ಪರಿಸರ ಸಪ್ತಾಹ ಹಮ್ಮಿಕೊಂಡು ಸುಮಾರು 60 ಸಾವಿರ ಸಸಿಗಳನ್ನು ನೆಡಲು ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕಿ ಅನ್ನಪೂರ್ಣ ತುಕಾರಾಂ ಹೇಳಿದರು.

ADVERTISEMENT
ADVERTISEMENT

ತಾಲ್ಲೂಕಿನ ನಿಡುಗುರ್ತಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ತಾಲ್ಲೂಕು ಆಡಳಿತ, ಅರಣ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದಕ್ಕೂ ಮುಂಚೆ ಬೆಂಗಳೂರಿನಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಳಾಮ್ಮ, ತಹಶೀಲ್ದಾರ್ ಅನಿಲ್ ಕುಮಾರ್ ಜಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಬಿಇಒ ಐ.ಆರ್.ಅಕ್ಕಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ರೆಡ್ಡಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಹನುಮಪ್ಪ ನಾಯಕ, ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಸೈಯದ್ ದಾದಾ ಖಲಂದರ್, ಬಿ.ಎಸ್.ಮಂಜುನಾಥ್ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
Comments0