ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತಿಭಾವಂತರ ಪ್ರೋತ್ಸಾಹ ಉತ್ತಮ ಕಾರ್ಯ’

Last Updated 7 ನವೆಂಬರ್ 2022, 16:18 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಸಾಧಕರು, ಪ್ರತಿಭಾವಂತರನ್ನು ಗುರುತಿಸಿ ಸರ್ಕಾರ ಪ್ರಶಸ್ತಿಗಳನ್ನು ನೀಡುತ್ತ ಬಂದಿದೆ. ಈಗ ಸಂಘ, ಸಂಸ್ಥೆಗಳು ಈ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹವಾದುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ತಿಳಿಸಿದರು.

ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಮಾತಾ ಪ್ರಕಾಶನವು ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕವಿಗೋಷ್ಠಿ, ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರಲ್ಲಿ ಒಂದೊಂದು ಬಗೆಯ ಪ್ರತಿಭೆ ಇರುತ್ತದೆ. ಅಂಥವರನ್ನು ಗುರುತಿಸಿ, ಗೌರವಿಸುವುದು ಉತ್ತಮ ಕೆಲಸ. ಇದು ಸರ್ಕಾರಕ್ಕೆ ಸಮಾನವಾದ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಗೋವಿಂದ ಮಾತನಾಡಿ, ಕಲೆಯ ತವರೂರು ವಿಜಯನಗರ ಸಾಮ್ರಾಜ್ಯ. ಆಗಿನ ರಾಜ ಮಹಾರಾಜರು ಕಲೆ ಕಲಾವಿದರನ್ನು ಪ್ರೋತ್ಸಾಹಿಸಿ ಕಲೆ, ಕಲಾವಿದರಿಗೆ ಮನ್ನಣೆ ನೀಡುತ್ತಿದ್ದರು. ಇಂದು ಸಂಘ ಸಂಸ್ಥೆಗಳು ಮಾಡುತ್ತಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ನಾಯಕರ ಹುಲುಗಪ್ಪ, ಧಾರವಾಡ ಸಿದ್ದಾಶ್ರಮದ ವಿದ್ಯಾನಂದ ಸ್ವಾಮೀಜಿ, ಅಬಕಾರಿ ಇನ್‌ಸ್ಪೆಕ್ಟರ್‌ ಗೀತಾ ತಗ್ಗೀಹಾಳ್, ಪ್ರಶಾಂತ್ ಕುಮಾರ ಇದ್ದರು. ವಿವಿಧ ಕ್ಷೇತ್ರದ 121 ಜನರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT