ಹೊಸಪೇಟೆ: ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಗಲಭೆ ನಡೆಸಿದವರನ್ನು ಶಿಕ್ಷೆಗೆ ಗುರಿಪಡಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸಬೇಕೆಂದು ಬಜರಂಗ ದಳ, ವಿಶ್ವ ಹಿಂದೂ ಪರಿಷತ್ ಆಗ್ರಹಿಸಿವೆ.

‘ತಡರಾತ್ರಿ ಜನರನ್ನು ಒಂದೆಡೆ ಸೇರಿಸಿ, ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡಲಾಗಿದೆ. ಪೊಲೀಸ್ ಠಾಣೆ ಮೇಲೆ, ಪೊಲೀಸರ ಮೇಲೆ ದಾಳಿ ನಡೆಸಲಾಗಿದೆ. ವ್ಯವಸ್ಥಿತವಾಗಿ ನಡೆಸಿರುವ ಗಲಭೆ ಇದು. ಅಮಾಯಕ ಹಿಂದೂಗಳ ಮೇಲೆಯೂ ದೌರ್ಜನ್ಯ ಎಸಗಲಾಗಿದೆ. ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಗಲಭೆಯಲ್ಲಿ ಭಾಗವಹಿಸಿದ್ದ ಎಲ್ಲರನ್ನೂ ವಶಕ್ಕೆ ಪಡೆದು, ಕಠಿಣ ಕಾನೂನು ಶಿಕ್ಷೆ ವಿಧಿಸಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಹಿರೇಮಠ, ಬಜರಂಗ ದಳದ ತಾಲ್ಲೂಕು ಸಂಚಾಲಕ ಎಸ್. ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ.

‘ಗಲಭೆಯಿಂದ ಆಸ್ತಿ ಹಾನಿಯಾಗಿರುವ ಹಿಂದೂಗಳಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕರ್ತವ್ಯನಿರತ ಪೊಲೀಸರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.