ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾರೋಟಿನಲ್ಲಿ ಶಿಕ್ಷಕ ದಂಪತಿ ಮೆರವಣಿಗೆ

ತೆಕ್ಕಲಕೋಟೆ: ವಿದ್ಯಾರ್ಥಿಗಳಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ
Published 13 ಆಗಸ್ಟ್ 2024, 15:40 IST
Last Updated 13 ಆಗಸ್ಟ್ 2024, 15:40 IST
ಅಕ್ಷರ ಗಾತ್ರ

ತೆಕ್ಕಲಕೋಟೆ: ಸಮೀಪದ ಹೆರಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕ ದಂಪತಿಗೆ ಹಳೇ ವಿದ್ಯಾರ್ಥಿಗಳು ಸೋಮವಾರ ಅದ್ದೂರಿಯಾಗಿ ಗ್ರಾಮದ ತುಂಬಾ ಮೆರವಣಿಗೆ ನಡೆಸಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದರು.

ಶಿಕ್ಷಕ ದಿವಾಕರ ನಾರಾಯಣ 20 ವರ್ಷ ಹಾಗೂ ಅವರ ಪತ್ನಿ ಅನುರಾಧ 14 ವರ್ಷ ಇದೇ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ತಮ್ಮ ಸ್ವಂತ ಜಿಲ್ಲೆ ವಿಜಯನಗರಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕ ದಿವಾಕರ ನಾರಾಯಣ, ‘ಪ್ರಾಥಮಿಕ ಶಾಲೆಯನ್ನು ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಶಾಲೆಯನ್ನಾಗಿ ಬೆಳೆಸಿದ್ದು ಹೆಮ್ಮೆ ಎನಿಸುತ್ತದೆ. ಸಹಕರಿಸಿದ ಎಲ್ಲರಿಗೂ ವಂದನೆಗಳು’ ಎಂದು ಹೇಳಿದರು.

‘ಶಿಕ್ಷಕ ಬೋಧನೆಗೆ ಮಾತ್ರ ಸೀಮಿತವಾಗದೆ, ಬೌದ್ಧಿಕ, ಶೈಕ್ಷಣಿಕ, ಆಧ್ಯಾತ್ಮಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿಯೂ ತೊಡಗಿಕೊಂಡು ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು’ ಎಂದು ಬಿಜೆಪಿ ಮುಖಂಡ ದರಪ್ಪ ನಾಯಕ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗುರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖ್ಯಗುರುಗಳು, ಶಿಕ್ಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT